


ಬಂಟ್ವಾಳ: ರಾಜ್ಯದ ಕರಾವಳಿ ಪ್ರದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಕೊರೊನಾ ವಾರಿಯರ್ಸ್ ಗಳನ್ನೂ ಬಿಟ್ಟಿಲ್ಲ. ಇಂದು ಮಂಗಳೂರು ನಗರದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಸಹಾಯಕ ಆಯುಕ್ತರಿಗೆ ಸೊಂಕು ದೃಢಪಟ್ಟಿದ್ದು, ಎ.ಸಿ.ಪಿ. ಕಚೇರಿಯನ್ನು ಸೀಲ್ ಡೌನ್ ಮಾಡಲಾಗಿದೆ. ಜಿಲ್ಲೆಯಲ್ಲಿ ಕೊರೊನಾ ಸೋಂಕು ಪೊಲೀಸರಿಗೆ ತಗಲುತ್ತಿದ್ದು, ಇದುವರೆಗೆ ಒಟ್ಟು 14 ಮಂದಿ ಪೊಲೀಸರಿಗೆ ಸೋಂಕು ದೃಡಪಟ್ಟಿದೆ.
10 ದಿನಗಳಿಂದ ಜಿಲ್ಲೆಯಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿದ್ದು, ಜಿಲ್ಲೆಯಲ್ಲಿ ಈವರೆಗೆ 741 ಮಂದಿಗೆ ಸೋಂಕು ತಗುಲಿದ್ದು, ಅದರಲ್ಲಿ 385 ಮಂದಿ ಸೋಂಕಿತರು ಗುಣಮುಖರಾಗಿದ್ದಾರೆ ಎಂಬ ಮಾಹಿತಿ ಇದೆ. ಇನ್ನು 342 ಸಕ್ರೀಯ ಪ್ರಕರಣಗಳಿದ್ದು, ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈವರೆಗೆ ಜಿಲ್ಲೆಯಲ್ಲಿ 16 ಮಂದಿ ಸೋಂಕಿಗೆ ಬಲಿಯಾದ ಬಗ್ಗೆ ವರದಿಯಾಗಿದೆ. ಇಂದು ಜಿಲ್ಲೆಯಲ್ಲಿ 85 ಮಂದಿಗೆ ಸೋಂಕು ಪತ್ತೆಯಾಗಿದ್ದು, ಈ ಬಗ್ಗೆ ಜಿಲ್ಲಾಡಳಿತ ಇನ್ನಷ್ಟೇ ಅಧಿಕೃತ ಆದೇಶ ಹೊರಡಿಸಬೇಕಿದೆ.





