


ಬೆಳ್ತಂಗಡಿ: ತಾಲೂಕಿನ ಮಡಂತ್ಯಾರು ಗ್ರಾ.ಪಂ. ವ್ಯಾಪ್ತಿಯ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಮತ್ತು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಇದರ ಸಹಯೋಗದಲ್ಲಿ ಮಂಜಲಪಲ್ಕೆಯಲ್ಲಿ ನಿರ್ಮಿಸಲಾದ ಹಿಂದೂ ರುದ್ರ ಭೂಮಿಯ ಲೋಕರ್ಪಣೆ ಕಾರ್ಯಕ್ರಮ ಮಂಜಲಪಲ್ಕೆ ಹಿಂದೂ ರುದ್ರ ಭೂಮಿ ಆವರಣದಲ್ಲಿ ನಡೆಯಿತು. ಇದರ ಲೋಕಾರ್ಪಣೆ ಕಾರ್ಯಕ್ರಮವನ್ನು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ನೆರವೇರಿಸಿ, ಮಡಂತ್ಯಾರು ಗ್ರಾ.ಪಂ. ಅಧ್ಯಕ್ಷ ಗೋಪಾಲಕೃಷ್ಣ ಕೆ. ಅಧ್ಯಕ್ಷತೆ ವಹಿಸಿದ್ದರು.
ವಿಧಾನ ಪರಿಷತ್ ಶಾಸಕ ಹರೀಶ್ ಕುಮಾರ್ ಹಾಗೂ ಪ್ರತಾಪ್ ಸಿಂಹ ನಾಯಕ್, ಕುವೆಟ್ಟು ಜಿ.ಪಂ. ಸದಸ್ಯೆ ಮಮತಾ ಎಂ. ಶೆಟ್ಟಿ, ತಾ.ಪಂ. ಸದಸ್ಯೆ ವಸಂತಿ ಲಕ್ಷ್ಮಣ ಕುಲಾಲ್, ಶ್ರೀ. ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಮುದಾಯ ಅಭಿವೃದ್ಧಿ ವಿಭಾಗದ ಪ್ರಾದೇಶಿಕ ನಿರ್ದೇಶಕ ಎ.ಶ್ರೀಹರಿ, ಯೋಜನಾಧಿಕಾರಿ ಯಶವಂತ್ ಶೆಟ್ಟಿ, ಗ್ರಾ.ಪಂ. ಉಪಾಧ್ಯಕ್ಷೆ ಜಯಂತಿ, ಪಂ.ಅ.ಅಧಿಕಾರಿ ನಾಗೇಶ್ ಎಂ., ಪಂ. ಸದಸ್ಯರು, ಸಿಬ್ಬಂದಿಗಳು, ಗ್ರಾಮಸ್ಥರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಮಂಜಲಪಲ್ಕೆ ಹಿಂದೂ ರುದ್ರ ಭೂಮಿ ಅಧ್ಯಕ್ಷ ಸತೀಶ್ ಶೆಟ್ಟಿ ಸ್ವಾಗತಿಸಿ, ಧರ್ಣಪ್ಪ ಗೌಡ ವಂದಿಸಿದರು. ಉಮಾ ಟಿ. ಗೌಡ ಕಾರ್ಯಕ್ರಮ ನಿರೂಪಿಸಿರು.





