ನವದೆಹಲಿ: ದೇಶದಲ್ಲಿ ಕೊರೊನಾ ವೈರಸ್ ಕಾಟ ಜೋರಾಗಿದ್ದು, ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದೆ. ಇದರಿಂದಾಗಿ ದೇಶದ ಒಟ್ಟು ಸೋಂಕಿತರ ಸಂಖ್ಯೆ 6.25 ಲಕ್ಷದ ಗಡಿ ದಾಟಿದೆ. ಈ ಕೋರೊನಾ ವೈರಸ್ ನಿಂದಾಗಿ ಈವರೆಗೆ 18 ಸಾವಿರಕ್ಕೂ ಅಧಿಕ ಮಂದಿ ಮೃತಪಟ್ಟಿದ್ದು, ಹೀಗಾಗಿ ಎಲ್ಲೆಡೆ ಆತಂಕ ಮನೆಮಾಡಿದೆ. ಇತ್ತೀಚಿನ ದಿನಗಳಲ್ಲಿ ಯಾವುದೇ ಟ್ರಾವೆಲ್ ಹಿಸ್ಟರಿ ಇಲ್ಲದವರಿಗೂ ಸೋಂಕು ತಗುಲುತ್ತಿರುವುದು ಗಾಬರಿ ಹುಟ್ಟಿಸುವಂತಿದೆ. ಈ ಮಧ್ಯೆ ಕೇಂದ್ರ ಆರೋಗ್ಯ ಸಚಿವಾಲಯ ಶುಭ ಸುದ್ದಿಯೊಂದನ್ನು ನೀಡಿದ್ದು, ಕೊರೊನಾ ಸೋಂಕಿತರ ಪೈಕಿ ಶೇ. 60 ರಷ್ಟು ಮಂದಿ ಗುಣಮುಖರಾಗಿದ್ದಾರೆ ಎಂದು ತಿಳಿಸಿದೆ. ವೇಗವಾಗಿ ನಡೆಯುತ್ತಿರುವ ಸೋಂಕು ಪರೀಕ್ಷೆ ಮತ್ತು ಸಕಾಲಕ್ಕೆ ಸೂಕ್ತ ಚಿಕಿತ್ಸೆ ನೀಡುತ್ತಿರುವ ಕಾರಣ ಈ ಬೆಳವಣಿಗೆಯಾಗಿದೆ ಎಂದು ಸಚಿವಾಲಯ ಮಾಹಿತಿಯೊಂದನ್ನು ನೀಡಿದೆ.

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here