


ಸಜೀಪನಡು: ಗ್ರಾ.ಪಂ. ಚರಂಡಿ ನಿರ್ವಹಣೆಯಲ್ಲಿ ನಿರ್ಲಕ್ಷ್ಯ ತೋರಿದ ಪರಿಣಾಮ ಬೈಲಗುತ್ತು ಪ್ರದೇಶವು ಸಂಪೂರ್ಣ ಜಲಾವೃತಗೊಂಡು ಹತ್ತಾರು ಮನೆಗಳಿಗೆ ಒಮ್ಮೆಲೆ ನೀರು ನುಗ್ಗಿ ಜನಜೀವನ ಅಸ್ತವ್ಯಸ್ತಗೊಂಡ ವಿಚಾರವು ತಿಳಿಯುತ್ತಿದ್ದಂತೆ ಸ್ಥಳಕ್ಕೆ ಶಾಸಕ ಯು.ಟಿ. ಖಾದರ್ ರವರು ದಿಡೀರ್ ಭೇಟಿ ಕೊಟ್ಟು ಅಧಿಕಾರಿಗಳಿಗೆ ಕ್ಷಿಪ್ರ ಕಾರ್ಯಾಚರಣೆ ಮಾಡುವ ಮುಖಾಂತರ ನೀರು ಸರಾಗವಾಗಿ ಹರಿಯುವಂತೆ ಕೂಡಲೇ ಚರಂಡಿಯ ವ್ಯವಸ್ಥೆಯನ್ನು ಮಾಡುವಂತೆ ಸೂಚಿಸಿದ ಮೇರೆಗೆ ಇದೀಗ ಜೆಸಿಬಿ ಯಂತ್ರದ ಮುಖಾಂತರ ಚರಂಡಿಯ ಹೂಲೆತ್ತುವ ಕಾರ್ಯವು ಭರದಿಂದ ಸಾಗುತ್ತಿದೆ.
ಶಾಸಕರ ಭೇಟಿಯಿಂದ ಅಧಿಕಾರಿಗಳು ಎಚ್ಚೆತ್ತು ಕಾರ್ಯಾಚರಣೆಯನ್ನು ಕೈಗೊಂಡಿರುವುದರಿಂದ ಪರಿಸರವಾಸಿಗಳು ನಿಟ್ಟುಸಿರು ಬಿಡುವಂತಾಗಿದೆ.
ಕಾಂಗ್ರೆಸ್ ಆಡಳಿತದ ಅವಧಿಯಲ್ಲಿ ಆದಂತಹ ಪ್ರಾಥಮಿಕ ಹಾಗೂ ಪ್ರೌಡ ಶಾಲೆ, ಗ್ರಾಮಪಂಚಾಯತ್ ಕಚೇರಿ, ಸಮುದಾಯ ಆರೋಗ್ಯ ಕೇಂದ್ರಗಳಿಗೆ ಸುಣ್ಣ ಬಣ್ಣವನ್ನು ಬಳಿದು ಇದುವೇ ನಮ್ಮ ಸಾಧನೆಯೆಂದು ಸಾಮಾಜಿಕ ಜಾಲತಾಣದಲ್ಲಿ ಪ್ರಚಾರವನ್ನು ಗಿಟ್ಟಿಸುವ ವ್ಯರ್ಥ ಪ್ರಯತ್ನವನ್ನು ಮಾಡಿದ ಎಸ್ಡಿಪಿಐ ಗ್ರಾಮದ ಮೂಲಭೂತ ಸೌಕರ್ಯವನ್ನು ಒದಗಿಸಿಕೊಡುವಲ್ಲಿ ಸಂಪೂರ್ಣ ವಿಫಲವಾಗಿದೆ.





