ಮಂಗಳೂರು: ಕೈಕಂಬ ಬಂಗ್ಲಗುಡ್ಡೆಯಲ್ಲಿ ಇಂದು ಗುಡ್ಡ ಕುಸಿತ ಉಂಟಾಗಿದ್ದು, ಮೂರು ಮನೆಗಳಿಗೆ ಸಂಪೂರ್ಣವಾಗಿ ಹಾನಿಯಾದ ಬಗ್ಗೆ ವರದಿಯಾಗಿದೆ. ಇನ್ನೂ ಹಲವು ಮನೆಗಳು ಅಪಾಯದಲ್ಲಿದೆ.
ಇಂದು ಮುಂಜಾನೆಯಿಂದ ನಿರಂತರವಾಗಿ ಗುಡ್ಡ ಕುಸಿಯುತ್ತಿದ್ದು, ಮಣ್ಣಿನ ಅಡಿಯಲ್ಲಿ ಮಕ್ಕಳು ಸಿಲುಕಿರುವ ಶಂಕೆ ಇದ್ದು, ಮಕ್ಕಳನ್ನು ರಕ್ಷಣೆ ಮಾಡುವ ಕಾರ್ಯಚರಣೆ ನಡೆಯುತ್ತಿದೆ.

ಸುಮಾರು 200 ರಿಂದ 250 ರಷ್ಟು ಮಂದಿ ಅಲ್ಲಿ ಸ್ಥಳದಲ್ಲಿ ಸೇರಿದ್ದು ಸಾರ್ವಜನಿಕರು ಸ್ಥಳಕ್ಕೆ ಬರದಂತೆ ಪೊಲೀಸರು ತೆರಳಿ ಎಚ್ಚರಿಕೆ ನೀಡಿದ್ದಾರೆ.

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here