



ನವದಹೆಲಿ : ದೇಶದಲ್ಲಿ ಕೊರೊನಾ ಸೋಂಕು ದಿನಕ್ಕೆ ಹೆಚ್ಚಾಗುತ್ತಿದೆ. ಅತೀ ಹೆಚ್ಚು ಸೋಂಕಿತರಿರುವ ದೇಶಗಳ ಪಟ್ಟಿಯಲ್ಲಿ ಭಾರತ ರಷ್ಯಾವನ್ನು ಹಿಂದಿಕ್ಕಿ ಮೂರನೇ ಸ್ಥಾನಕ್ಕೇರಿದೆ.
ನಿನ್ನೆ ಒಂದೇ ದಿನ ಭಾರತದಲ್ಲಿ ಸುಮಾರು 25 ಸಾವಿರ ಸೋಂಕು ಪ್ರಕರಣಗಳು ವರದಿಯಾಗಿದ್ದು, ಒಂದೇ ದಿನ 421 ಸೋಂಕಿತರು ಮೃತಪಟ್ಟಿದ್ದಾರೆ. ಜುಲೈ ತಿಂಗಳ ಮೊದಲ ಐದು ದಿನದಲ್ಲೇ 2300 ಮಂದಿ ಕೋವಿಡ್ ಸೋಂಕಿನಿಂದ ಸಾವನ್ನಪ್ಪಿದ್ದಾರೆ.
ದೇಶದಲ್ಲಿ ಒಂದೇ ದಿನ 24,912 ಹೊಸ ಕೋವಿಡ್-19 ಸೋಂಕು ಪ್ರಕರಣಗಳು ದೃಢವಾಗಿದೆ. ಜೂನ್ ತಿಂಗಳಲ್ಲಿ ಒಟ್ಟು ನಾಲ್ಕು ಲಕ್ಷ ಹೊಸ ಪ್ರಕರಣಗಳು ಪತ್ತೆಯಾಗಿತ್ತು. ಆದರೆ ಜುಲೈ ತಿಂಗಳ ಮೊದಲ ಐದು ದಿನದಲ್ಲೇ ಒಂದು ಲಕ್ಷಕ್ಕಿಂತ ಹೆಚ್ಚಿನ ಸೋಂಕು ಪ್ರಕರಣಗಳು ಪತ್ತೆಯಾಗಿದೆ. ಹೀಗಾಗಿ ಸೋಂಕಿನ ವೇಗ ಏರಿಕೆ ಕಾಣುತ್ತಿದ್ದು, ಜನರಲ್ಲಿ ಆತಂಕ ಮನೆ ಮಾಡಿದೆ.
ಸೋಂಕಿತರ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದ್ದ ರಷ್ಯಾ ನಾಲ್ಕನೇ ಸ್ಥಾನಕ್ಕೆ ಇಳಿದಿದ್ದು, ಭಾರತ ಮೂರನೇ ಸ್ಥಾನಕ್ಕೇರಿದೆ. ಅಮೇರಿಕಾ ಮತ್ತು ಬ್ರೆಜಿಲ್ ಕ್ರಮವಾಗಿ ಮೊದಲೆರಡು ಸ್ಥಾನಗಳಲ್ಲಿದೆ.






