



ಬಂಟ್ವಾಳ: ದ.ಕ. ಜಿಲ್ಲೆಯಲ್ಲಿ ಇಂದು 83 ಹೊಸ ಕೋವಿಡ್ ಕೇಸ್ ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 1359 ಕ್ಕೆ ಏರಿಕೆಯಾಗಿದೆ.
ಇಂದು 99 ಮಂದಿ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಈವರೆಗೆ ಒಟ್ಟು 683 ಮಂದಿ ಗುಣಮುಖರಾದ ಬಗ್ಗೆ ವರದಿಯಾಗಿದೆ. ಇಂದು ಜಿಲ್ಲೆಯಲ್ಲಿ ಒಬ್ಬರು ಮೃತಪಟ್ಟಿದ್ದು, ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 26 ಕ್ಕೆ ಏರಿಕೆಯಾಗಿದೆ. 651 ಸಕ್ರೀಯ ಪ್ರಕರಣಗಳಿದ್ದು, 3 ಮಂದಿ ಸೋಂಕಿತರು ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿರುವ ಬಗ್ಗೆ ವರದಿಯಾಗಿದೆ.
ಉಡುಪಿ ಜಿಲ್ಲೆಯಲ್ಲಿ ಇಂದು 28 ಹೊಸ ಕೋವಿಡ್ ಕೇಸ್ ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 1390 ಕ್ಕೆ ಏರಿಕೆಯಾಗಿದೆ. 205 ಸಕ್ರೀಯ ಪ್ರಕರಣಗಳಿದ್ದು, 1182 ಮಂದಿ ಚಿಕಿತ್ಸೆ ಪಡೆಯುತ್ತಿರುವ ಬಗ್ಗೆ ವರದಿಯಾಗಿದೆ.






