ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು 183 ಮಂದಿಯಲ್ಲಿ ಕೋವಿಡ್ ಸೋಂಕು ದೃಢ ಪಟ್ಟಿರುವ ಬಗ್ಗೆ ವರದಿಯಾಗಿದೆ. ಈ ಬಗ್ಗೆ ಅಧಿಕೃತ ಮಾಹಿತಿ ಇನ್ನಷ್ಟೇ ಬರಬೇಕಿದೆ.

ಜಿಲ್ಲೆಯಲ್ಲಿ ಇಂದು ಪ್ರಾಥಮಿಕ ಸಂಪರ್ಕದಿಂದ ಹಾಗೂ SARI ಮತ್ತು ILE ಪ್ರಕರಣಗಳಿಂದಲೂ ಕೋವಿಡ್ ಸೋಂಕಿನ ಪ್ರಕರಣ ಹೆಚ್ಚಳವಾಗಿದ್ದು, ಇದರೊಂದಿಗೆ ವಿದೇಶದಿಂದ ಬಂದಿರುವ ಕೆಲವು ಪ್ರಯಾಣಿಕರಲ್ಲೂ ಸೋಂಕು ದೃಢ ಪಟ್ಟಿವೆ ಎಂದು ಜಿಲ್ಲೆಯ ಅರೋಗ್ಯ ಇಲಾಖೆಯ ಮೂಲಗಳು ತಿಳಿಸಿವೆ.

ಕಳೆದ ಕೆಲವು ದಿನಗಳಿಂದ ಉಳ್ಳಾಲ ಪರಿಸರದಲ್ಲಿ ಹೆಚ್ಚಿನ ಸೋಂಕಿನ ಪ್ರಕರಣಗಳು ಕಂಡುಬಂದಿದೆ. ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ಗಣನೀಯ ಪ್ರಮಾಣದಲ್ಲಿ ಏರಿಕೆಯಾಗುತ್ತಿದ್ದು ಜನರಲ್ಲಿ ಆತಂಕ ಹುಟ್ಟಿಸಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್-19 ಗೆ ಇಂದು ಬೆಳಿಗ್ಗೆ ಮೂವರು ಸೋಂಕಿತರು ಸಾವನ್ನಪ್ಪಿದ್ದು. ಜಿಲ್ಲೆಯಲ್ಲಿ ಸಾವಿನ ಸಂಖ್ಯೆ 29ಕ್ಕೆ ಏರಿಕೆಯಾಗಿದೆ.

ಇಂದು ಮಂಗಳೂರು ಮಹಾನಗರ ಪಾಲಿಕೆಯ ಕಾರ್ಪೋರೇಟರ್‍ ಗೂ ಸೋಂಕು ದೃಢಪಟ್ಟಿದ್ದು, ಈ ಬಗ್ಗೆ ಸ್ವತಃ ಕಾರ್ಪೋರೇಟರ್ ಅವರೇ ಸಾಮಾಜಿಕ ಜಾಲತಾಣದಲ್ಲಿ ಹೇಳಿಕೊಂಡಿದ್ದಾರೆ.

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here