ಬೆಳ್ತಂಗಡಿ: ತಾಲೂಕಿನ ಪಾರೆಂಕಿ ಗ್ರಾಮದ ಒಂದೇ ಕುಟುಂಬದ ನಾಲ್ಕು ಮಂದಿಗೆ ಇಂದು ಕೊರೋನಾ ಸೋಂಕು ದೃಢಪಟ್ಟಿದೆ.

ಕೆಲವು ದಿನಗಳ ಹಿಂದೆ ಮಡಂತ್ಯಾರು ಸಮೀಪ ಕಾನ್ವೆಂಟ್ ರಸ್ತೆ ಬಳಿ ಸಂಬಂಧಿಕರ ಮನೆಯಲ್ಲಿದ್ದು, ಮೀನು ಮಾರಾಟ ಮಾಡುತ್ತಿದ್ದ ಓರ್ವ ಯುವಕನಿಗೆ ಸೋಂಕು ದೃಢಪಟ್ಟಿತ್ತು. ಈ ಹಿನ್ನೆಲೆ ಆತನ ಸಂಬಂಧಿಕರ ಗಂಟಲ ದ್ರವ ಪರೀಕ್ಷೆಗೆ ಕಳುಹಿಸಲಾಗಿತ್ತು. ಇಂದು ಅದರ ವರದಿ ಬಂದಿದ್ದು, ಆತನ ಸಂಬಂಧಿಕರ ಮನೆಯ ಇಬ್ಬರು ಮಹಿಳೆಯರು ಹಾಗೂ ಇಬ್ಬರು ಪುರುಷರಿಗೆ ಸೋಂಕು ಇರುವುದು ದೃಢಪಟ್ಟಿದೆ.

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here