ಮಂಗಳೂರು: ದ.ಕ. ಜಿಲ್ಲೆಯಲ್ಲಿ ಇಂದು 167 ಹೊಸ ಕೊರೋನಾ ಸೋಂಕು ಪತ್ತೆಯಾಗಿದೆ. ಈ ಮೂಲಕ ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 1709ಕ್ಕೆ ಏರಿಕೆಯಾಗಿದೆ.

ಪ್ರಾಥಮಿಕ ಸಂಪರ್ಕದಿಂದ 64 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ. 42 ಮಂದಿಯಲ್ಲಿ ಐಎಲ್ ಐ ಪ್ರಕರಣ ಪತ್ತೆಯಾಗಿದೆ. 6 ಮಂದಿಯಲ್ಲಿ ಸಾರಿ ಪ್ರಕರಣ ದೃಢಪಟ್ಟಿದೆ. ಬೆಂಗಳೂರಿನಿಂದ ಮರಳಿದ ಒಬ್ಬರಲ್ಲಿ ಸೋಂಕು ಪತ್ತೆಯಾಗಿದೆ. ಕತಾರ್, ದುಬೈಯಿಂದ ಮರಳಿದ ಮೂವರಲ್ಲಿ ಸೋಂಕು ದೃಢಪಟ್ಟಿದೆ. ಪ್ರೀಸರ್ಜರಿ ಸ್ಯಾಂಪಲ್ ಪಾಸಿಟಿವ್ 13 ಮಂದಿಯಲ್ಲಿ ದೃಢಪಟ್ಟಿದೆ. 38 ಸೋಂಕಿತರ ಮೂಲ ಪತ್ತೆ ಹಚ್ಚಲಾಗುತ್ತಿದೆ ಎಂಬ ಮಾಹಿತಿ ಇದೆ.
ಜಿಲ್ಲೆಯಲ್ಲಿ ಇಂದು 7 ಮಂದಿ ಸೋಂಕಿತರು ಗುಣಮುಖರಾಗಿದ್ದು, ಒಟ್ಟು 702 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. 977 ಸಕ್ರೀಯ ಪ್ರಕರಣಗಳಿವೆ ಎಂದು ಆರೋಗ್ಯ ಇಲಾಖೆಯ ಬುಲೆಟಿನ್ ನಿಂದ ತಿಳಿದುಬಂದಿದೆ.
ಜಿಲ್ಲೆಯಲ್ಲಿ ಇಂದು ಇಬ್ಬರು ಸೋಂಕಿತರು ಮೃತಪಟ್ಟಿದ್ದು, ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 30ಕ್ಕೆ ಏರಿಕೆಯಾಗಿದೆ.

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here