



ಕಲ್ಲಡ್ಕ: ಕಲ್ಲಡ್ಕ ವಲಯದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಆಶ್ರಯದಲ್ಲಿ ವೀರಕಂಭದ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾರ್ಥಮಿಕ ಶಾಲೆ ಮಜಿಯಲ್ಲಿ ವೀರಕಂಭ ಒಕ್ಕೂಟದ ವತಿಯಿಂದ ಪರಿಸರ ಜಾಗೃತಿ ಕಾರ್ಯಕ್ರಮ ಜರಗಿತು.
ಒಕ್ಕೂಟದ ಅಧ್ಯಕ್ಷ ಕೊರಗಪ್ಪ ನಾಯ್ಕ ಸಿಂಗೇರಿ ಅವರು, ಶಾಲಾ ಔಷಧಿ ವನದಲ್ಲಿ ಲಿಂಬೆ ಗಿಡ ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಯೋಜನೆಯ ಕಲ್ಲಡ್ಕ ವಲಯ ಮೇಲ್ವಿಚಾರಕಿ ಪ್ರೇಮಾ ಈ ಕಾರ್ಯಕ್ರಮದ ಧ್ಯೇಯೋದ್ದೇಶ,ಯೋಜನೆಯ ಕಾರ್ಯಕ್ರಮ ಹಾಗೂ ಕೋವಿಡ್-19 ಕುರಿತು ಮಾಹಿತಿ ನೀಡಿದರು. ಗುಂಪಿನ ಸದಸ್ಯರಿಗೆ ಹಣ್ಣಿನ ಗಿಡಗಳನ್ನು ವಿತರಿಸಲಾಯಿತು. ಈ ಸಂದರ್ಭದಲ್ಲಿ ಒಕ್ಕೂಟದ ಪದಾಧಿಕಾರಿಗಳು, ಜನಜಾಗೃತಿ ವೇದಿಕೆ ಸದಸ್ಯ ವೀರಪ್ಪ ಮೂಲ್ಯ, ಶಾಲಾ ಶಿಕ್ಷಕಿ ಸಂಗೀತ ಶರ್ಮ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಗುಲ್ಸನ ಬಾನು ಸ್ವಾಗತಿಸಿ, ಸುನಿತಾ ವಂದಿಸಿದರು. ಸೇವಾ ಪ್ರತಿನಿಧಿ ರೇವತಿ ಕಾರ್ಯಕ್ರಮ ನಿರೂಪಿಸಿದರು.






