



ಬೆಳ್ತಂಗಡಿ: ತಾಲೂಕಿನ ಸವಣಾಲು ಗೋಪಾಲಕೃಷ್ಣ ಭಜನಾ ಮಂದಿರದಲ್ಲಿ ತೋಟಗಾರಿಕಾ ಇಲಾಖೆಯ ವತಿಯಿಂದ ಮಹಾತ್ಮ ಗಾಂಧಿ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಜಾರಿಯ ಕುರಿತು ಮಾಹಿತಿ ಕಾರ್ಯಕ್ರಮ ನಡೆಯಿತು.
ಈ ಕಾರ್ಯಕ್ರಮದಲ್ಲಿ ಅಳದಂಗಡಿ ತೋಟಗಾರಿಕಾ ರೈತ ಉತ್ಪದಕರ್ ಕಂಪೆನಿಯ ಅಧ್ಯಕ್ಷ ಹರಿದಾಸ ಮಾತನಾಡಿ, ಮಹಾತ್ಮ ಗಾಂಧಿ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಕುರಿತು ಮಾಹಿತಿ ನೀಡಿದರು. ಕಂಪೆನಿಯ ನಿರ್ದೇಶಕ ಶಿವ ಕುಮಾರ್ ಮಾತನಾಡಿ, ಕಟ್ಟಡ ನಿರ್ಮಾಣ ಕಾರ್ಮಿಕ ಸವಲತ್ತು ಬಗ್ಗೆ ಮಾಹಿತಿ ನೀಡಿದರು. ನಂತರ ಮಾಸ್ಕ್ ಹಾಗೂ ಸ್ಯಾನಿಟೈಸರ್ ವಿತರಣೆ ಮಾಡಲಾಯಿತು. ರಾಜೀವ್ ಸಾಲ್ಯಾನ್ ಮಾತನಾಡಿದರು. ಕಾರ್ಯಕ್ರಮದಲ್ಲಿ ಪ್ರಮುಖರಾದ ರಾಜೇಶ್ ಭಟ್, ರಾಜೇಶ್ ಸವಣಾಲು, ಜಯಾನಂದ್ ಸವಣಾಲು, ಸಂಕೇತ್ ಸವಣಾಲು ಉಪಸ್ಥಿತರಿದ್ದರು.





