


ಬಂಟ್ವಾಳ: ಕರ್ನಾಟಕ ಸರಕಾರದ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವರಾದ ಸನ್ಮಾನ್ಯ ಸುರೇಶ್ಕುಮಾರ್ ದಂಪತಿಗಳು ಶ್ರೀರಾಮ ವಿದ್ಯಾಕೇಂದ್ರಕ್ಕೆ ಭೇಟಿ ನೀಡಿದರು. ವಿದ್ಯಾಕೇಂದ್ರದ ಹಿರಿಯ ಡಾ| ಪ್ರಭಾಕರ ಭಟ್ ಕಲ್ಲಡ್ಕ ಸಚಿವರಿಗೆ ಶಾಲು ಹೊದಿಸಿ ಸ್ವಾಗತಿಸಿದರು. ವಿದ್ಯಾ ಕೇಂದ್ರದ ಅಧ್ಯಕ್ಷ ನಾರಾಯಣ ಸೋಮಯಾಜಿ ಮಾಲಾರ್ಪಣೆಗೈದರು. ಕೋವಿಡ್ 19ರ ಸಂದಿಗ್ಧ ಪರಿಸ್ಥಿತಿಯಲ್ಲಿ ಶೈಕ್ಷಣಿಕ ಚಟುವಟಿಕೆಗಳ ಬಗ್ಗೆ ಸಮಾಲೋಚನೆ ನಡೆಸಿದರು.
ಈ ಸಂದರ್ಭದಲ್ಲಿ ವಿದ್ಯಾಕೇಂದ್ರದ ಆಡಳಿತ ಮಂಡಳಿ ಸದಸ್ಯರು, ಕ್ಷೇತ್ರ ಶಿಕ್ಷಣಾಧಿಕಾರಿಗಳು, ಗ್ರಾಮಸ್ಥರು, ಎಲ್ಲಾ ವಿಭಾಗಗಳ ಮುಖ್ಯಸ್ಥರು ಹಾಗೂ ಶಿಕ್ಷಕರು ಉಪಸ್ಥಿತರಿದ್ದರು.






