



ಮಂಗಳೂರು: ದ.ಕ. ಜಿಲ್ಲೆಯಲ್ಲಿ ಇಂದು 196 ಕೊರೋನಾ ಸೋಂಕು ದೃಢಪಟ್ಟಿದ್ದು, ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 2230ಕ್ಕೆ ಏರಿಕೆಯಾಗಿದೆ.
ಇಂದು ಪತ್ತೆಯಾದ ಪಾಸಿಟಿವ್ ಪ್ರಕರಣಗಳ ಪೈಕಿ ಪ್ರಾಥಮಿಕ ಸಂಪರ್ಕದಿಂದ 20 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ. 91 ಮಂದಿಯಲ್ಲಿ ಐಎಲ್ ಐ ಪ್ರಕರಣ ದೃಢಪಟ್ಟಿದೆ. 16 ಮಂದಿಯಲ್ಲಿ ಸಾರಿ ಪ್ರಕರಣ ಪತ್ತೆಯಾಗಿದೆ. 10 ಮಂದಿ ವಿದೇಶದಿಂದ ಆಗಮಿಸಿದವರಲ್ಲಿ ಸೋಂಕು ಪತ್ತೆಯಾಗಿದೆ. 57 ಪ್ರಕರಣಗಳ ಮೂಲ ಪತ್ತೆಹಚ್ಚಲಾಗುತ್ತಿದೆ. ಇಬ್ಬರಲ್ಲಿ ಪ್ರಿ ಡಿಲೆವರಿ ಸ್ಯಾಂಪಲ್ ಪಾಸಿಟಿವ್ ಪತ್ತೆಯಾಗಿದೆ.
ಜಿಲ್ಲೆಯಲ್ಲಿ ಇಂದು 94 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದು,ಒಟ್ಟು 876 ಮಂದಿ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಗೊಂಡಿದ್ದಾರೆ. ಈಗ ಜಿಲ್ಲೆಯಲ್ಲಿ 1308 ಸಕ್ರೀಯ ಪ್ರಕರಣಗಳಿವೆ ಎಂದು ವರದಿಯಾಗಿದೆ.
ಇಂದು ಜಿಲ್ಲೆಯಲ್ಲಿ 5 ಮಂದಿ ಸೋಂಕಿತರ ಸಾವು ಸಂಭವಿಸಿದೆ. 58 ಹಾಗೂ 68 ವರ್ಷದ ಮಹಿಳೆಯರು ಹಾಗೂ 72, 50, 55 ವರ್ಷದ ಪುರುಷರು ಸೋಂಕಿಗೆ ಮೃತಪಟ್ಟಿದ್ದಾರೆ. ಆ ಮೂಲಕ ಜಿಲ್ಲೆಯಲ್ಲಿ ಸಾವಿನ ಸಂಖ್ಯೆ 46 ಕ್ಕೆ ಏರಿಕೆಯಾಗಿದೆ.






