ಮಂಗಳೂರು: ದ.ಕ. ಜಿಲ್ಲೆಯಲ್ಲಿ ಇಂದು 131 ಹೊಸ ಕೊರೊನಾ ಸೋಂಕು ಪತ್ತೆಯಾಗಿದ್ದು, ಆ ಮೂಲಕ ಕೋವಿಡ್ ಸೋಂಕಿತರ ಸಂಖ್ಯೆ 2361ಕ್ಕೆ ಏರಿಕೆಯಾಗಿದೆ.
ಪ್ರಾಥಮಿಕ ಸಂಪರ್ಕದಿಂದ 16 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. 63 ಮಂದಿಯಲ್ಲಿ ಐಎಲ್ ಐ ಪ್ರಕರಣ ಪತ್ತೆಯಾಗಿದೆ. 10 ಮಂದಿಯಲ್ಲಿ ಸಾರಿ ಪ್ರಕರಣ ದಾಖಲಾಗಿದೆ. ಅಂತರಾಷ್ಟ್ರೀಯ ಪ್ರಯಾಣದಿಂದ ಮರಳಿದ ನಾಲ್ವರಲ್ಲಿ ಸೋಂಕು ಪತ್ತೆಯಾಗಿದೆ. 38 ಮಂದಿಯ ಸೋಂಕಿನ ಮೂಲ ಪತ್ತೆ ಹಚ್ಚಲಾಗುತ್ತಿದೆ.
ಇಂದು 62 ಸೋಂಕಿತರು ಕೊರೊನಾ ಮುಕ್ತರಾಗಿದ್ದು, ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. ಆ ಮೂಲಕ 938 ಮಂದಿ ಸೋಂಕಿತರು ಗುಣಮುಖರಾದ ಬಗ್ಗೆ ವರದಿಯಾಗಿದೆ. ಜಿಲ್ಲೆಯಲ್ಲಿ 1373 ಸಕ್ರೀಯ ಪ್ರಕರಣಗಳಿವೆ.

ಇಂದು ಜಿಲ್ಲೆಯಲ್ಲಿ 70, 53, 60, 70 ವರ್ಷಗಳ 4 ಮಂದಿ ಪುರುಷ ಸೋಂಕಿತರು ಮೃತಪಟ್ಟಿದ್ದಾರೆ. ಆ ಮೂಲಕ 50 ಕ್ಕೆ ಏರಿಕೆಯಾಗಿದೆ.

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here