ಮಂಗಳೂರು : ದ.ಕ ಜಿಲ್ಲೆಯ ಜನರಿಗೆ ಕೊರೋನಾ ಸೋಂಕಿಗೆ ಇನ್ನು ಉಚಿತ ಚಿಕಿತ್ಸೆ ದೊರಕಲಿದೆ ಎಂದು ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ತಿಳಿಸಿದ್ದಾರೆ. ಈ ಬಗ್ಗೆ ಮಾತನಾಡಿದ ಅವರು ಕೊರೋನಾದ ತಪಾಸಣೆ ಇರಲಿ ಆಥವಾ ಚಿಕಿತ್ಸೆ ಇರಲಿ ಎಲ್ಲಾದಕ್ಕೂ ಖಾಸಗಿ ಆಸ್ಪತ್ರೆಗಳಲ್ಲಿ ಪೂರ್ಣ ಪ್ರಮಾಣದಲ್ಲಿ ಉಚಿತ ಚಿಕಿತ್ಸೆ ನೀಡಲಾಗುತ್ತದೆ ಎಂದು ಹೇಳಿದ್ದಾರೆ.
ಬರೀ ಆಧಾರ್‌ ಕಾರ್ಡ್ ತೆಗೆದುಕೊಂಡು ಹೋದರೆ ಸಾಕು, ಬಿಪಿಎಲ್‌ ಎಪಿಎಲ್‌ ಯಾವುದೇ ಪಡಿತರ ಚೀಟಿ ಹೊಂದಿದ್ದರೂ ಕೂಡಾ ಸಂಪೂರ್ಣ ಉಚಿತ ಚಿಕಿತ್ಸೆ ನೀಡಲು ಖಾಸಗಿ ಆಸ್ಪತ್ರೆಗಳೊಂದಿಗೆ ಒಪ್ಪಂದ ಮಾಡಿಕೊಂಡಿದ್ದೇವೆ ಎಂದು ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ಸ್ಪಷ್ಟಪಡಿಸಿದ್ದಾರೆ.
ನಮ್ಮ ಇಲಾಖೆಯಿಂದ ಎಲ್ಲಾ ಆಸ್ಪತ್ರೆಯಲ್ಲಿ ಓರ್ವ ಆರೋಗ್ಯ ಮಿತ್ರ ಇರುತ್ತಾರೆ. ಪ್ರತಿ ಆಸ್ಪತ್ರೆಯ ಮುಂಭಾಗ ಹೆಲ್ಪ್‌ ಡೆಸ್ಕ್‌ ಇರುತ್ತದೆ. ಅಲ್ಲಿ ಅವರ ಆಧಾರ್‍ ಕಾರ್ಡ್ ತೋರಿಸಿದರೂ ಸಾಕು ಕೊರೊನಾ ದೃಢಪಟ್ಟಲ್ಲಿ ಉಚಿತ ಚಿಕಿತ್ಸೆ ನೀಡಲಾಗುವುದು ಎಂದು ತಿಳಿಸಿದ್ದಾರೆ. ಎಲ್ಲಾ ಆಸ್ಪತ್ರೆಗಳಿಗೆ ತೆರಳಿ ಪರಿಸ್ಥಿತಿ ಅವಲೋಕಿಸುತ್ತಿದ್ದೇವೆ ಎಂದು ಹೇಳಿದ ಅವರು ಒಂದು ವಾರದ ಲಾಕ್‌ಡೌನ್‌ ಸಂದರ್ಭದಲ್ಲಿ ಜನರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಲಾಗುವುದು. ಜನರು ಎಲ್ಲರೂ ಸಹಕಾರ ಬೇಕು ಎಂದು ಮನವಿ ಮಾಡಿದ್ದಾರೆ. ಪ್ರಸ್ತುತ ಎಲ್ಲಾ ಖಾಸಗಿ ಆಸ್ಪತ್ರೆಯಲ್ಲಿ 2 ಸಾವಿರಕ್ಕೂ ಅಧಿಕ ಬೆಡ್‌ಗಳು ಇದ್ದು ಅಗತ್ಯವಿದ್ದಲ್ಲಿ ಹಾಸ್ಟೆಲ್‌ಗಳನ್ನು ವ್ಯವಸ್ಥೆ ಮಾಡಲಾಗುವುದು ಎಂದು ಮಾಹಿತಿ ನೀಡಿದ್ದಾರೆ.

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here