



ಬೆಳ್ತಂಗಡಿ: ತಾಲೂಕಿನ ಮದ್ದಡ್ಕದಲ್ಲಿ ಸ್ನೇಹಾಲಯ ಚಾರಿಟೇಬಲ್ ಟ್ರಸ್ಟ್ ಮಂಗಳೂರು ಇದರ ವತಿಯಿಂದ ನೂತನವಾಗಿ ನಿರ್ಮಿಸಲಾದ ಮನೆಯನ್ನು ನೋಣಯ್ಯ ಪೂಜಾರಿ ಅವರಿಗೆ ಹಸ್ತಾಂತರಿಸಲಾಯಿತು.
ಸ್ನೇಹಾಲಯ ಚಾರಿಟೇಬಲ್ ಟ್ರಸ್ಟ್ ನ ನೇತೃತ್ವದಲ್ಲಿ ನೂತನ ನಿರ್ಮಿತ ಮನೆಯನ್ನು ಶಾಸಕ ಹರೀಶ್ ಪೂಂಜಾ ಹಸ್ತಾಂತರಿಸಿದರು.
ನೋಣಯ್ಯ ಪೂಜಾರಿ ಅವರ ಕಷ್ಟಕ್ಕೆ ಸ್ಪಂದಿಸಿದ ಸ್ನೇಹಾಲಯ ಚಾರಿಟೇಬಲ್ ಟ್ರಸ್ಟ್ ಅವರಿಗೆ ನೂತನ ಮನೆ ನಿರ್ಮಾಣ ಕಾರ್ಯದ ಮೂಲಕ ಮಾದರಿಯಾಗಿದೆ.





