


ಅವರು ಬುಧವಾರ ಬಂಟ್ವಾಳ ಕ್ಷೇತ್ರಕ್ಕೆ ಪ್ರಧಾನಮಂತ್ರಿ ಗ್ರಾಮಸಡಕ್ ಯೋಜನೆಯಡಿ ಮಂಜೂರಾದ ಒಟ್ಟು 30 ಕೋ.ರೂ.ಅನುದಾನದಲ್ಲಿ ಮೂರು ರಸ್ತೆ ಕಾಮಗಾರಿಗಳಿಗೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರ ಜತೆ ಶಿಲಾನ್ಯಾಸ ನೆರವೇರಿಸಿ ಮಾತನಾಡಿದರು.
ಈ ಕಾಮಗಾರಿಗಳಿಗೆ ಅನುದಾನ ನೀಡಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ, ಸಾರಿಗೆ ಸಚಿವ ನಿತಿನ್ ಘಡ್ಕರಿ, ರಾಜ್ಯದ ಮುಖ್ಯಮಂತ್ರಿ ಯಡಿಯೂರಪ್ಪ, ಗ್ರಾಮೀಣಾಭಿವೃದ್ಧಿ ಸಚಿವ ಈಶ್ವರಪ್ಪ, ರಸ್ತೆಗೆ ಪ್ರಸ್ತಾವನೆ ನೀಡಿರುವ ಶಾಸಕ ರಾಜೇಶ್ ನಾಯ್ಕ್ ಹಾಗೂ ಪಕ್ಷದ ಹಿರಿಯರಿಗೆ ಕೃತಜ್ಞತೆಯನ್ನು ಸಲ್ಲಿಸುತ್ತೇನೆ ಎಂದರು.
ಈ ಸಂದರ್ಭದಲ್ಲಿ ಗೋಳ್ತಮಜಲು-ಮಂಚಿಕಟ್ಟೆ-ನೀರಬೈಲು-
ಕಾರ್ಯಕ್ರಮದಲ್ಲಿ ರಾಜ್ಯ ಕಿಯೋನಿಕ್ಸ್ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ್, ಜಿ.ಪಂ.ಸದಸ್ಯರಾದ ತುಂಗಪ್ಪ ಬಂಗೇರ, ಮಂಜುಳಾ ಮಾಧವ ಮಾವೆ, ಕಮಲಾಕ್ಷಿ ಪೂಜಾರಿ, ತಾ.ಪಂ.ಸದಸ್ಯ ಮಹಾಬಲ ಆಳ್ವ, ಮಾಜಿ ಶಾಸಕ ಪದ್ಮನಾಭ ಕೊಟ್ಟಾರಿ, ಬಂಟ್ವಾಳ ಎಪಿಎಂಸಿ ಅಧ್ಯಕ್ಷ ನೇಮಿರಾಜ ರೈ, ಬಂಟ್ವಾಳ ಕ್ಷೇತ್ರ ಬಿಜೆಪಿ ಅಧ್ಯಕ್ಷ ದೇವಪ್ಪ ಪೂಜಾರಿ, ಪ್ರಮುಖರಾದ ಸುಲೋಚನಾ ಜಿ.ಕೆ.ಭಟ್, ಸಂದೇಶ ಶೆಟ್ಟಿ, ವಜ್ರನಾಥ ಕಲ್ಲಡ್ಕ, ನಾರಾಯಣ ಕುಲಾಲ್, ಮೋನಪ್ಪ ದೇವಸ್ಯ, ಮುಸ್ತಫಾ ಕೆ.ಎಸ್, ಗಣೇಶ್ ರೈ ಮಾಣಿ, ಗುತ್ತಿಗೆದಾರ ಪ್ರೇಮನಾಥ್ ಮೊದಲಾದವರು ಉಪಸ್ಥಿತರಿದ್ದರು. ರಾಜೇಶ್ ಕೊಟ್ಟಾರಿ ಕಾರ್ಯಕ್ರಮ ನಿರ್ವಹಿಸಿದರು.





