ಬಂಟ್ವಾಳ: 2020 ಸಾಲಿನ ದ್ವಿತೀಯ ಪಿ.ಯು.ಸಿ ಪರೀಕ್ಷೆಗೆ ಹಾಜರಾದ 118 ವಿದ್ಯಾರ್ಥಿಗಳಲ್ಲಿ 112 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇ. 95% ಸಾಧಿಸಲಾಗಿದೆ. ಕಾಲೇಜಿನ ಮೂರು ವಿಭಾಗದಲ್ಲಿ 17 ಮಂದಿ ಡಿಸ್ಟಿಂಕ್ಷನ್, 64 ವಿದ್ಯಾರ್ಥಿಗಳು ಪ್ರಥಮ ದರ್ಜೆ, 25 ಮಂದಿ ದ್ವಿತೀಯ ದರ್ಜೆ ಹಾಗೂ 6 ಮಂದಿ ತೃತೀಯ ದರ್ಜೆಯಲ್ಲಿ ಉತ್ತೀರ್ಣರಾಗಿರುತ್ತಾರೆ.

ಕಲಾ ವಿಭಾಗದಲ್ಲಿ 17 ವಿದ್ಯಾರ್ಥಿಗಳು ಹಾಜರಾಗಿದ್ದು,15 ಮಂದಿ ವಿದ್ಯಾರ್ಥಿಗಳು ಉತ್ತೀರ್ಣರಾಗಿ, 88% ಫಲಿತಾಂಶ ಬಂದಿದೆ. ಅಫ್ರಾ 510 ಅಂಕಗಳೊಂದಿಗೆ ಕಾಲೇಜಿಗೆ ಪ್ರಥಮ ಸ್ಥಾನ ಪಡೆದಿರುತ್ತಾಳೆ.

ವಾಣಿಜ್ಯ ವಿಭಾಗದಲ್ಲಿ 68 ವಿದ್ಯಾರ್ಥಿಗಳು ಹಾಜರಾಗಿದ್ದು, 65 ವಿದ್ಯಾರ್ಥಿಗಳು ಉತ್ತೀರ್ಣರಾಗಿ, 95% ಫಲಿತಾಂಶ ಬಂದಿದೆ. ಫಾತಿಮ ನಿಶಾ 554 ಅಂಕಗಳೊಂದಿಗೆ ಕಾಲೇಜಿಗೆ ಪ್ರಥಮ ಸ್ಥಾನ ಪಡೆದಿರುತ್ತಾಳೆ.

ವಿಜ್ಞಾನ ವಿಭಾಗದಲ್ಲಿ 35 ವಿದ್ಯಾರ್ಥಿಗಳು ಹಾಜರಾಗಿದ್ದು, 34 ಮಂದಿ ವಿದ್ಯಾರ್ಥಿಗಳು ಉತ್ತೀರ್ಣರಾಗಿ 97% ಫಲಿತಾಂಶ ಪಡೆದಿದ್ದು, ಹೀನಾ 546 ಅಂಕಗಳೊಂದಿಗೆ ಕಾಲೇಜಿಗೆ ಪ್ರಥಮ ಸ್ಥಾನ ಪಡೆದಿರುತ್ತಾಳೆ.

 

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here