



ಬೆಳ್ತಂಗಡಿ : ಸವಣಾಲು ಗ್ರಾಮದ ಪೇಲತ್ತಕಟ್ಟೆಯಲ್ಲಿ ಅನಾರೋಗ್ಯ ಪೀಡಿತ ವೃದ್ಧೆಯೊಬ್ಬರನ್ನು ಅವರ ಮಗ ಹಾಗೂ ಮೊಮ್ಮಗ ಹಿಂಸೆ ನೀಡುತ್ತಿದ್ದ ವಿಡಿಯೋ ಒಂದು ವೈರಲ್ ಆಗಿತ್ತು. ಈ ಬಗ್ಗೆ ಪ್ರತಿಕ್ರಿಯಿಸಿದ ಶಾಸಕ ಹರೀಶ್ ಪೂಂಜಾ, ಈ ಘಟನೆ ನನ್ನ ಗಮನಕ್ಕೆ ಬಂದಿದೆ. ತುರ್ತು ಕೋವಿಡ್ ಸಂಬಂಧಿಸಿದ ಸಭೆ ಬೆಂಗಳೂರಿನಲ್ಲಿ ಇದ್ದ ಕಾರಣ ಘಟನೆ ನಡೆದ ಮನೆಗೆ ಭೇಟಿ ನೀಡಲು ಸಾಧ್ಯವಾಗಿಲ್ಲ.
ವಿಚಾರ ತಿಳಿದ ಕೂಡಲೇ ತಮ್ಮ ಕಾರ್ಯಕರ್ತರನ್ನು ಹಾಗೂ ಪೊಲೀಸರನ್ನು ಸ್ಥಳಕ್ಕೆ ಕಳುಹಿಸಿ ವೃದ್ಧೆಯ ಕ್ಷೇಮಕ್ಕೆ ಬೇಕಾದ ವ್ಯವಸ್ಥೆ ಮಾಡಲಾಗಿದೆ ಹಾಗೂ ಆರೋಪಿಯನ್ನು ಬಂಧಿಸಲಾಗಿದೆ ಎಂದು ಶಾಸಕ ಹರೀಶ್ ಪೂಂಜಾ ತಿಳಿಸಿದ್ದಾರೆ.





