Wednesday, October 18, 2023

ದೇಶದಲ್ಲಿ ಒಂದೇ ದಿನ 40,425 ಹೊಸ ಕೊರೊನಾ ಪ್ರಕರಣ ದೃಢ

Must read

ನವದೆಹಲಿ: ಭಾರತದಲ್ಲಿ ಒಂದೇ ದಿನದಲ್ಲಿ 40,425 ಹೊಸ ಕೊರೊನ ವೈರಸ್ ಸೋಂಕಿನ ಪ್ರಕರಣ ದಾಖಲಾಗಿದೆ. ಕೇವಲ 24 ಗಂಟೆಯಲ್ಲಿ ಇಷ್ಟು ದೊಡ್ಡಮಟ್ಟದಲ್ಲಿ ಪ್ರಕರಣಗಳು ದಾಖಲಾಗಿದ್ದು ಇದೇ ಮೊದಲು ಎನ್ನಲಾಗುತ್ತಿದೆ. ಆ ಮೂಲಕ ದೇಶದಲ್ಲಿ ಕೋವಿಡ್-19 ರೋಗಿಗಳ ಸಂಖ್ಯೆ ಸುಮಾರು 11 ಲಕ್ಷಕ್ಕೆ ಏರಿಕೆಯಾಗಿದೆ.

ದೇಶದಲ್ಲಿ ಕೇವಲ ಒಂದೇ ದಿನದಲ್ಲಿ 40,425 ಹೊಸ ಪ್ರಕರಣ ದಾಖಲಾಗಿದ್ದು, 681 ಜನರು ಮೃತಪಟ್ಟಿದ್ದಾರೆ. ಮಹಾರಾಷ್ಟ್ರದಲ್ಲಿ ಅತಿ ಹೆಚ್ಚು ಸೋಂಕಿತರಿದ್ದು, ನಿನ್ನೆ ಒಂದೇ ದಿನ 9, 518 ಮಂದಿಗೆ ಸೋಂಕು ತಗುಲಿದೆ. ಇಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 3,10, 455ಕ್ಕೇರಿದ್ದು 258ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ.

ಭಾರತದಲ್ಲಿ ಪ್ರಸ್ತುತ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ 11,18,043. ಇವುಗಳಲ್ಲಿ 3,90,459 ಸಕ್ರಿಯ ಪ್ರಕರಣಗಳಾಗಿವೆ. ದೇಶದಲ್ಲಿ ಇದುವರೆಗೂ ಮೃತಪಟ್ಟವರ ಸಂಖ್ಯೆ 27,497ಕ್ಕೆ ಏರಿಕೆಯಾಗಿದೆ .

ಕರ್ನಾಟಕ ರಾಜ್ಯದಲ್ಲಿ 4,120 ಹೊಸ ಪ್ರಕರಣಗಳು ವರದಿಯಾಗಿದ್ದು, 91 ಮಂದಿ ಮೃತಪಟ್ಟು, ಒಟ್ಟು ಸಾವಿನ ಸಂಖ್ಯೆ 1,331ಕ್ಕೇರಿದ್ದು ಇದುವರೆಗೆ 63, 772 ಮಂದಿ ಸೋಂಕಿತರಾಗಿದ್ದಾರೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

 

More articles

Latest article