



ಬಂಟ್ವಾಳ: ದ.ಕ. ಜಿಲ್ಲೆಯಲ್ಲಿ ಇಂದು 149 ಕೋವಿಡ್ ಕೇಸ್ ದೃಢಪಟ್ಟಿದ್ದು, ಒಟ್ಟು ಸೋಂಕಿತರ ಸಂಖ್ಯೆ 3834 ಕ್ಕೆ ಏರಿಕೆಯಾಗಿದೆ.
ಇಂದು ಜಿಲ್ಲೆಯಲ್ಲಿ 127 ಮಂದಿ ಸೋಂಕಿತರು ಗುಣಮುಖರಾಗಿದ್ದಾರೆ. ಈವರೆಗೆ 1675 ಮಂದಿ ಸಂಪೂರ್ಣ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ ಎಂದು ವರದಿಯಾಗಿದೆ. ಇನ್ನು 2072 ಸಕ್ರೀಯ ಪ್ರಕರಣಗಳಿವೆ.
ಇಂದು ದೃಢಪಟ್ಟ 149 ಕೇಸ್ ಗಳ ಪೈಕಿ 15 ಮಂದಿಯ ಸೋಂಕಿನ ಮೂಲ ಇನ್ನೂ ಪತ್ತೆಯಾಗಿಲ್ಲ.
ಇಂದು 52 ವರ್ಷದ ಮಹಿಳೆ ಸೇರಿ 81, 51, 65, 63 ವರ್ಷದ ಪುರುಷ ಸೋಂಕಿತರ ಸಹಿತ 5 ಮಂದಿ ಮೃತಪಟ್ಟಿದ್ದಾರೆ. ಆ ಮೂಲಕ ಒಟ್ಟು 86 ಮಂದಿ ಕೋವಿಡ್ ನಿಂದ ಮೃತಪಟ್ಟ ಬಗ್ಗೆ ವರದಿಯಾಗಿದೆ.






