ಉಡುಪಿ: ಇಲ್ಲಿನ ಪುತ್ತಿಗೆ ಮಠದ ಸುಗುಣೇಂದ್ರ ತೀರ್ಥ ಸ್ವಾಮೀಜಿ ಅವರಿಗೆ ಕೊರೊನಾ ಸೋಂಕು ತಗುಲಿರುವುದು ದೃಢವಾಗಿದೆ. ಅವರನ್ನು ಮಣಿಪಾಲ ಕೆಎಂಸಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಶ್ರೀಗಳಿಗೆ ಜ್ವರ ಕಾಣಿಸಿಕೊಂಡ ಹಿನ್ನಲೆಯಲ್ಲಿ ತಪಾಸಣೆಗೆಂದು ಆಸ್ಪತ್ರೆಗೆ ತೆರಳಿದ್ದರು. ಈ ವೇಳೆ ಅವರ ಗಂಟಲ ದ್ರವ ಪರೀಕ್ಷೆಗೆ ರವಾನಿಸಲಾಗಿತ್ತು. ಇಂದು ಅದರ ವರದಿ ಕೈ ಸೇರಿದ್ದು, ಕೊರೊನಾ ಪಾಸಿಟಿವ್ ಬಂದಿರುವ ಹಿನ್ನೆಲೆ ಅವರನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ.

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here