ಮಂಗಳೂರು: ದ.ಕ. ಜಿಲ್ಲೆಯಲ್ಲಿ ಗುರುವಾರ ಬೆಳಗ್ಗೆ 5 ಗಂಟೆಯ ತನಕ ಮಾತ್ರ ಲಾಕ್ ಡೌನ್ ಇರಲ್ಲಿದ್ದು, ಆ ಬಳಿಕ ಯಾವುದೇ ಲಾಕ್ ಡೌನ್ ಇರುವುದಿಲ್ಲ ಎಂದು ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಸ್ಪಷ್ಟಪಡಿಸಿದ್ದಾರೆ.
ಈ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿರುವ ಅವರು, ದ.ಕ. ಜಿಲ್ಲೆಯಲ್ಲಿ ಈಗಾಗಲೇ ಲಾಕ್ ಡಾನ್ ಜಾರಿಯಲ್ಲಿದ್ದು, ಜುಲೈ 22ರ ಬುಧವಾರ ಸಂಜೆ ಲಾಕ್ ಡೌನ್ ಅವಧಿ ಮುಗಿಯಲಿದೆ. ಈ ಹಿನ್ನೆಲೆ ಸಿ.ಎಂ. ಬಿ.ಎಸ್.ವೈ. ಜತೆ ಲಾಕ್ ಡೌನ್ ಮುಂದುವರೆಸುವ ಬಗ್ಗೆ ಚರ್ಚೆ ನಡೆಸಿದ್ದೇನೆ. ಮುಖ್ಯಮಂತ್ರಿಗಳು ಲಾಕ್ ಡೌನ್ ಮುಂದುವರೆಸದಂತೆ ಸೂಚನೆ ನೀಡಿದ್ದಾರೆ. ಅವರ ಸಲಹೆಯಂತೆ ಲಾಕ್ ಡೌನ್ ಮುಂದುವರೆಸದಂತೆ ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

ಈ ಬಗ್ಗೆ ಅಧಿಕೃತ ಆದೇಶವನ್ನು ಜಿಲ್ಲಾಧಿಕಾರಿಗಳು ಹೊರಡಿಸಲಿದ್ದು, ಸಭೆ ನಡೆಸಿ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಅವರು ಪ್ರತಿಕ್ರಿಯೆ ನೀಡಿದ್ದಾರೆ.

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here