ಬೆಂಗಳೂರು: ಕೊರೊನಾ ವಾರಿಯರ್ಸ್ ಆಗಿ ಮುಂಚೂಣಿಯಲ್ಲಿ ದುಡಿಯುತ್ತಿರುವ ವೈದ್ಯರು ಹಾಗೂ ನರ್ಸ್‌ಗಳಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದ್ದು ಆಯುಷ್ ಮತ್ತು ಯುನಾನಿ ವೈದ್ಯರ ಹಾಗೂ ನರ್ಸ್‌ಗಳ ತಿಂಗಳ ವೇತನವನ್ನು ಹೆಚ್ಚಳ ಮಾಡಿದೆ.

ಈ ಬಗ್ಗೆ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ಅವರು ಮಾಹಿತಿ ನೀಡಿ, ”ಆಯುಷ್ ಮತ್ತು ಯುನಾನಿ ವೈದ್ಯರ ತಿಂಗಳ ಸಂಬಳವನ್ನು 25 ಸಾವಿರದಿಂದ 48,000ಕ್ಕೆ ಏರಿಸಿದ್ದು, 6 ತಿಂಗಳ ಕಾಲ ಕರ್ನಾಟಕದ ನರ್ಸ್​ಗಳ ವೇತನವನ್ನು 30 ಸಾವಿರ ರೂ.ಗೆ ಏರಿಕೆ ಮಾಡಲಾಗಿದೆ. ಹಾಗೆಇದು ಬಿಬಿಎಂಪಿ, ಆರೋಗ್ಯ, ಆಯುಷ್‌ನ ಎಲ್ಲಾ ನರ್ಸ್‌ಗಳಿಗೆ ಅನ್ವಯವಾಗಲಿದೆ. ಕೊರೊನಾ ಕಾರಣದಿಂದ ತಾತ್ಕಾಲಿಕವಾಗಿ‌ ನೇಮಕ ಮಾಡಲಾಗಿರುವ ಎಂಬಿಬಿಎಸ್​ ವೈದ್ಯರಿಗೆ 80 ಸಾವಿರ ರೂ. ವೇತನ ನೀಡಲಾಗುತ್ತದೆ” ಎಂದು ತಿಳಿಸಿರುವುದಾಗಿ ವರದಿಯಾಗಿದೆ.

ಇದೇ ಸಂದರ್ಭದಲ್ಲಿ ಖಾಸಗಿ ಆಸ್ಪತ್ರೆಗಳಲ್ಲಿ ಅಧಿಕ ಹಣ ವಸೂಲಿ ಮಾಡಿದರೆ ಕ್ರಮಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ ಅವರು, ”ರಾಜ್ಯದ ಖಾಸಗಿ ಆಸ್ಪತ್ರೆಗಳಲ್ಲೂ ಆಯುಷ್ಮಾನ್ ಭಾರತ್ ಯೋಜನೆಯಡಿ ದರ ಪಡೆಯಬೇಕು” ಎಂದು ಹೇಳಿದ್ದಾರೆ

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here