ಮಂಗಳೂರು: ದ.ಕ. ಜಿಲ್ಲೆಯಲ್ಲಿ ಇಂದು 162 ಕೋವಿಡ್ ಪಾಸಿಟಿವ್ ಕೇಸ್ ದೃಢಪಟ್ಟಿದ್ದು, ಒಟ್ಟು ಸೋಂಕಿತರ ಸಂಖ್ಯೆ 3996ಕ್ಕೆ ಏರಿಕೆಯಾಗಿದೆ.
ಇನ್ನು ಪ್ರಾಥಮಿಕ ಸಂಪರ್ಕದಿಂದ 13 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ. 70 ಐ ಎಲ್ ಐ, 18 ಸಾರಿ ಪ್ರಕರಣಗಳಾಗಿದೆ. ಅಂತರಾಜ್ಯ ಪ್ರಯಾಣದಿಂದ ಒಬ್ಬರಲ್ಲಿ ಸೋಂಕು ದೃಢಪಟ್ಟಿದೆ. ಇನ್ನುಳಿದ 60 ಮಂದಿಯ ಸೋಂಕಿನ ಮೂಲ ಪತ್ತೆ ಹಚ್ಚಲಾಗುತ್ತಿದೆ.
ಜಿಲ್ಲೆಯಲ್ಲಿ ಇಂದು 69 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ. ಒಟ್ಟು 1744 ಮಂದಿ ಕೊರೊನಾದಿಂದ ಗುಣಮುಖರಾಗಿದ್ದಾರೆ. 2160 ಸಕ್ರೀಯ ಪ್ರಕರಣಗಳಿವೆ.
ಇಂದು ಜಿಲ್ಲೆಯಲ್ಲಿ 60, 70, 75, 66 ವರ್ಷದ ಮಹಿಳೆಯರು ಹಾಗೂ 54 ವರ್ಷದ ಪುರುಷ ಸೇರಿ 5 ಮಂದಿ ಕೋವಿಡ್ ಗೆ ಬಲಿಯಾಗಿದ್ದಾರೆ. ಜಿಲ್ಲೆಯಲ್ಲಿ ಒಟ್ಟು ಮಂದಿ ಸೋಂಕಿಗೆ ಬಲಿಯಾದ ಬಗ್ಗೆ ವರದಿಯಾಗಿದೆ.

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here