ಬೆಂಗಳೂರು: ಕೊರೊನಾ ವೈರಸ್ ನಿಯಂತ್ರಣಕ್ಕಾಗಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಹೇರಲಾಗಿದ್ದ ಲಾಕ್ ಡೌನ್ ತೆರವುಗೊಳಿಸಲಾಗಿದೆ. ಅದಲ್ಲದೇ ಇನ್ನು ಮುಂದೆ ರಾಜ್ಯದ ಯಾವುದೇ ಜಿಲ್ಲೆಯಲ್ಲೂ ಲಾಕ್ ಡೌನ್ ಇರುವುದಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಸ್ಪಷ್ಟಪಡಿಸಿದ್ದಾರೆ.

ಕೊರೊನಾ ನಿಯಂತ್ರಣಕ್ಕೆ ತಜ್ಞರು 5ಟಿ ತಂತ್ರವಾದ ಟೆಸ್ಟ್, ಟ್ರ್ಯಾಕ್​​, ಟ್ರೇಸ್, ಟ್ರೀಟ್​​ ಅಂಡ್​​ ಟೆಕ್ನಾಲಜಿ ಎಂಬುದನ್ನು ನಾವು ಸಮರ್ಪಕವಾಗಿ ಬಳಸಿಕೊಳ್ಳಬೇಕಿದೆ ಎಂದು ಹೇಳಿದ್ದರು.

ರಾಜ್ಯದಲ್ಲಿ ಲಾಕ್ ಡೌನ್ ತೆರವಾದರೂ ಅನ್ ಲಾಕ್ 2.0 ಮಾರ್ಗಸೂಚಿಗಳಂತೆ ಸಂಡೇ ಲಾಕ್ ಡೌನ್ , ನೈಟ್ ಕರ್ಫ್ಯೂ ನಲ್ಲಿ ಬದಲಾವಣೆ ಇಲ್ಲ ಎಂದು ಹೇಳಲಾಗಿದೆ. ರಾಜ್ಯಾದ್ಯಂತ ರಾತ್ರಿ 9.00 ಗಂಟೆಯಿಂದ ಬೆಳಗ್ಗೆ 5.00 ಗಂಟೆಯವರೆಗೆ ಕರ್ಫ್ಯೂ ಸ್ಥಿತಿ ಹಾಗೂ ಸದ್ಯ ಚಾಲ್ತಿಯಲ್ಲಿರುವ ಪ್ರತೀ ಭಾನುವಾರದ ಲಾಕ್ ಡೌನ್ ಯಥಾ ಸ್ಥಿತಿ ಮುಂದುವರಿಯಲಿದೆ ಎಂದು ಮಾರ್ಗಸೂಚಿಯಲ್ಲಿ ಹೇಳಲಾಗಿದೆ.

ಇದಲ್ಲದೆ ಆಯಾ ಜಿಲ್ಲಾಡಳಿತಗಳ ಪ್ರತ್ಯೇಕ ಮಾರ್ಗಸೂಚಿಗಳು ಪ್ರಕಟಗೊಳ್ಳುವವರೆಗೂ ಅನ್ ಲಾಕ್ 2.0ರ ಮಾರ್ಗಸೂಚಿಯು ಈ ಮೇಲಿನ ಬದಲಾವಣೆಗಳೊಂದಿಗೆ ರಾಜ್ಯಾದ್ಯಂತ ಜಾರಿಯಲ್ಲಿರುತ್ತದೆ ಎಂದು ತಿಳಿಸಲಾಗಿದೆ.

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here