


ಬಂಟ್ವಾಳ: ದ.ಕ. ಜಿಲ್ಲೆಯಲ್ಲಿ ಇಂದು 180 ಹೊಸ ಕೋವಿಡ್ ಸೋಂಕು ಪತ್ತೆಯಾಗಿದೆ. ಒಟ್ಟು ಸೋಂಕಿತರ ಸಂಖ್ಯೆ 4394ಕ್ಕೆ ಏರಿಕೆಯಾಗಿದೆ.
ಇಂದು ಪತ್ತೆಯಾದ 180 ಸೋಂಕಿನ ಪೈಕಿ ಪ್ರಾಥಮಿಕ ಸಂಪರ್ಕದಿಂದ 56ಯಲ್ಲಿ ಸೋಂಕು ಪತ್ತೆಯಾಗಿದೆ. 68 ಮಂದಿಯಲ್ಲಿ ಐಎಲ್ ಐ ಪ್ರಕರಣಗಳು ದೃಢಪಟ್ಟಿದೆ. 10 ಸಾರಿ ಪ್ರಕರಣಗಳು ಪತ್ತೆಯಾಗಿದೆ. ಅಂತರಾಷ್ಟ್ರೀಯ ಪ್ರಯಾಣದಿಂದ ಬಂದವರಲ್ಲಿ ಒಬ್ಬರಲ್ಲಿ ಸೋಂಕು ದೃಢಪಟ್ಟಿದೆ. 45 ಮಂದಿಯ ಸೋಂಕಿನ ಮೂಲ ಪತ್ತೆಯಾಗಿಲ್ಲ.
ಜಿಲ್ಲೆಯಲ್ಲಿ ಇಂದು 125 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದು, ಈವರೆಗೆ ಒಟ್ಟು 1987 ಮಂದಿ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಗೊಂಡಿದ್ದಾರೆ. 2300 ಸಕ್ರೀಯ ಪ್ರಕರಣಗಳಿವೆ ಎಂದು ವರದಿಯಾಗಿದೆ.
ಇಂದು ಜಿಲ್ಲೆಯಲ್ಲಿ 44, 56, 67, 42, 67 ವರ್ಷದ ಪುರುಷ ಸೋಂಕಿತರು ಹಾಗೂ 75, 65, 61 ವರ್ಷದ ಮಹಿಳಾ ಸೋಂಕಿತರು ಸೇರಿ ಒಟ್ಟು 8 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ. ಜಿಲ್ಲೆಯಲ್ಲಿ ಒಟ್ಟು 107 ಮಂದಿ ಬಲಿಯಾಗಿದ್ದಾರೆ.





