ಮಂಗಳೂರು: ದ.ಕ. ಜಿಲ್ಲೆಯಲ್ಲಿ ಇಂದು 199 ಹೊಸ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಆ ಮೂಲಕ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 4811ಕ್ಕೆ ಏರಿಕೆಯಾಗಿದೆ.
ಇಂದು ಜಿಲ್ಲೆಯಲ್ಲಿ 90 ಮಂದಿ ಗುಣಮುಖರಾಗಿದ್ದು, ಜಿಲ್ಲೆಯಲ್ಲಿ ಒಟ್ಟು 2217 ಮಂದಿ ಸಂಪೂರ್ಣ ಗುಣಮುಖರಾಗಿದ್ದಾರೆ. 2471 ಸಕ್ರೀಯ ಪ್ರಕರಣಗಳಿವೆ.

ಇಂದು ಪತ್ತೆಯಾದ 199 ಪ್ರಕರಣಗಳ ಪೈಕಿ 31 ಮಂದಿಯಲ್ಲಿ ಪ್ರಾಥಮಿಕ ಸಂಪರ್ಕದಿಂದ ಸೋಂಕು ಪತ್ತೆಯಾಗಿದೆ. 73 ಐ ಎಲ್ ಐ ಪ್ರಕರಣಗಳಾಗಿವೆ. 10 ಸಾರಿ ಪ್ರಕರಣಗಳಾಗಿವೆ. ಇಬ್ಬರು ವಿದೇಶದಿಂದ ಮರಳಿದವರಲ್ಲಿ ಸೋಂಕು ಪತ್ತೆಯಾಗಿದೆ. 83 ಮಂದಿಯ ಸೋಂಕಿನ ಮೂಲ ಪತ್ತೆ ಹಚ್ಚಲಾಗುತ್ತಿದೆ.
ಇಂದು ಜಿಲ್ಲೆಯಲ್ಲಿ 45 ವರ್ಷದ ಮಹಿಳೆ, 71, 70, 55, 56, 72, 55, 70 ವರ್ಷದ ಪುರುಷ ಸೋಂಕಿತರು ಸಹಿತ 8 ಮಂದಿ ಮೃತಪಟ್ಟಿದ್ದಾರೆ. ಈವರೆಗೆ ಸೋಂಕಿಗೆ ಮೃತಪಟ್ಟವರ ಸಂಖ್ಯೆ 123 ಗೆ ಏರಿಕೆಯಾಗಿದೆ.

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here