


ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಡಾ. ಕೆ.ವಿ. ರಾಜೇಂದ್ರ ಅವರು ಇಂದು ಅಧಿಕಾರ ಸ್ವೀಕರಿಸಿದರು. ನಿರ್ಗಮಿತ ಜಿಲ್ಲಾಧಿಕಾರಿ ಸಿಂಧೂ ರೂಪೇಶ್ ಅವರು ಪ್ರಭಾರ ಹಸ್ತಾಂತರಿಸಿದರು.
ಅಪರ ಜಿಲ್ಲಾಧಿಕಾರಿ ಎಂ.ಜೆ. ರೂಪಾ ಹಾಗೂ ವಿವಿಧ ಇಲಾಖಾಧಿಕಾರಿಗಳು ಉಪಸ್ಥಿತರಿದ್ದರು. ಡಾ. ಕೆ.ವಿ. ರಾಜೇಂದ್ರ ಅವರು ದ.ಕ. ಜಿಲ್ಲೆಯ 130 ನೇ ಜಿಲ್ಲಾಧಿಕಾರಿ.





