ಬೆಂಗಳೂರು: ಕೊರೋನಾ ಸೋಂಕು ನಿಯಂತ್ರಣಕ್ಕಾಗಿ ದೇಶಾದ್ಯಂತ ಜಾರಿಗೊಳಿಸಿದ್ದ ಲಾಕ್ ಡೌನ್ ತೆರವು ಮೂರನೇ ಹಂತದ ಮಾರ್ಗಸೂಚಿಗಳನ್ನು ಕೇಂದ್ರ ಗೃಹ ಸಚಿವಾಲಯ ನಿನ್ನೆ ಬಿಡುಗಡೆ ಮಾಡಿದ್ದು, ಇದಕ್ಕೆ ಸಂಬಂಧ ಪಟ್ಟಂತೆ ಇಂದು ರಾಜ್ಯ ಸರ್ಕಾರ ಕೂಡ ಅನ್ಲಾಕ್ 3.0 ಮಾರ್ಗಸೂಚಿಯನ್ನು ಪ್ರಕಟಿಸಿದೆ.
ಮುಂದಿನ ಸಂಡೇ ಲಾಕ್ಡೌನ್ ಇರುವುದಿಲ್ಲ. ಆಗಸ್ಟ್ 2ರಂದು ಲಾಕ್ಡೌನ್ ತೆರವುಗೊಳಿಸಲಾಗಿದೆ. ರಾಜ್ಯದಲ್ಲಿ ಕೊರೊನಾ ಸೋಂಕು ತಡೆಯುವ ಉದ್ದೇಶದಿಂದ ಪ್ರತಿದಿನ ರಾತ್ರಿ ಕರ್ಫ್ಯೂ ಮತ್ತು ಭಾನುವಾರ ಕಂಪ್ಲೀಟ್ ಲಾಕ್ಡೌನ್ ಜಾರಿ ಮಾಡಲಾಗಿತ್ತು. ಇದನ್ನು ತೆರವುಗೊಳಿಸಲಾಗಿದೆ.

ರಾಜ್ಯ ಸರ್ಕಾರದಿಂದ ಅನ್ಲಾಕ್ ಮಾರ್ಗಸೂಚಿಗಳನ್ನು ಪ್ರಕಟಿಸಲಾಗಿದೆ. ಸಂಡೆ ಲಾಕ್ಡೌನ್ ಇರುವುದಿಲ್ಲ. ನೈಟ್ ಕರ್ಫ್ಯೂ ತೆರವುಗೊಳಿಸಲಾಗಿದೆ. ಅದೇ ರೀತಿ ಶನಿವಾರದ ಸರ್ಕಾರಿ ರಜೆಯನ್ನು ರದ್ದು ಮಾಡಲಾಗಿದೆ ಎಂದು ಹೇಳಲಾಗಿದೆ.
ಕೋವಿಡ್‌ ಸೋಂಕು ಹೆಚ್ಚುತ್ತಲೇ ಇರುವುದರಿಂದ ಆಗಸ್ಟ್‌ 31ರವರೆಗೂ ಶಾಲಾ, ಕಾಲೇಜು ಹಾಗೂ ಶೈಕ್ಷಣಿಕ ಸಂಸ್ಥೆಗಳನ್ನು ಆರಂಭಿಸಲು ಅನುಮತಿ ನೀಡಿಲ್ಲ.

ಸದ್ಯಕ್ಕೆ ಮೆಟ್ರೋ ಸಂಚಾರ, ಚಿತ್ರಮಂದಿರ, ಸ್ವಿಮ್ಮಿಂಗ್ ಪೂಲ್, ಮನರಂಜನಾ ಉದ್ಯಾನವನ, ತೆರೆಯುವುದಕ್ಕೆ ಅನುಮತಿ ನೀಡಲಾಗಿಲ್ಲ ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಜನರು ಗುಂಪು ಸೇರುವುದರ ಮೇಲಿದ್ದ ನಿರ್ಬಂಧವನ್ನು ಮುಂದುವರಿಸಲಾಗಿದೆ ಎಂದು ಮಾರ್ಗಸೂಚಿಯಲ್ಲಿ ತಿಳಿಸಿದೆ.

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here