



ಬಂಟ್ವಾಳ: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ರವರು ಶುಕ್ರವಾರ ಸಂಜೆ ಕೇಂದ್ರದ ಮಾಜಿ ಸಚಿವ ಬಿ.ಜನಾರ್ಧನ ಪೂಜಾರಿಯವರನ್ನು ಬಸ್ತಿಪಡ್ಪುವಿನ ಮನೆಯಲ್ಲಿ ಭೇಟಿಯಾಗಿ ಯೋಗ ಕ್ಷೇಮ ವಿಚಾರಿಸಿದರು.
ಕೆಪಿಸಿಸಿ ಅಧ್ಯಕ್ಷರಾದ ಬಳಿಕ ದಕ್ಷಿಣ ಕನ್ನಡದ ಮೊದಲ ಭೇಟಿಯ ಸಂದರ್ಭದಲ್ಲಿ ಪೂಜಾರಿಯವರನ್ನು ಭೇಟಿ ಮಾಡಿರುವ ಅವರು, ರಾಜ್ಯದ ರಾಜಕೀಯ ವಿಚಾರಗಳ ಕುರಿತಾಗಿಯೂ ಪೂಜಾರಿಯವರ ಜೊತೆ ಚರ್ಚಿಸಿದರು ಎನ್ನಲಾಗಿದೆ.
ಕೆಪಿಸಿಸಿ ಕಾರ್ಯದರ್ಶಿ ಸಲೀಂ ಆಹಮ್ಮದ್ ಮಾಜಿ ಸಂಸದ ವಿನಯಕುಮಾರ್ ಸೊರಕೆ, ಜನಾರ್ಧನ ಪೂಜಾರಿಯವರ ಪುತ್ರ ದೀಪಕ್ ಪೂಜಾರಿ ಈ ಸಂದರ್ಭ ಉಪಸ್ಥಿತರಿದ್ದರು.






