ಬೆಂಗಳೂರು: ಕರ್ನಾಟಕದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಈ ಬಗ್ಗೆ ಅವರು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಅವರು ಬರೆದುಕೊಂಡಿದ್ದಾರೆ.
ನನ್ನ ಕೊರೊನಾ ಪರೀಕ್ಷೆಯಲ್ಲಿ ಪಾಸಿಟಿವ್ ಎಂದು ಬಂದಿದ್ದು, ರೋಗ ಲಕ್ಷಣಗಳಿಲ್ಲದಿದ್ದರೂ, ಮುನ್ನೆಚ್ಚರಿಕಾ ದೃಷಿಯಿಂದ ವೈದ್ಯರ ಸಲಹೆಯಂತೆ ಆಸ್ಪತ್ರೆಗೆ ದಾಖಲಾಗಿದ್ದೇನೆ ಎಂದು ಬರೆದುಕೊಂಡಿದ್ದಾರೆ.

ಕಳೆದ ಕೆಲವು ದಿನಗಳಿಂದ ನನ್ನ ಸಂಪರ್ಕಕ್ಕೆ ಬಂದಿರುವವರು ಕ್ವಾರಂಟೈನ್ ನಲ್ಲಿದ್ದು ಮುಂಜಾಗ್ರತೆ ವಹಿಸಿ ಎಂದು ಅವರು ಮನವಿಯನ್ನು ಮಾಡಿಕೊಂಡಿದ್ದಾರೆ.
ನಿನ್ನೆ ಮಧ್ಯಾಹ್ನದ ಬಿಜೆಪಿಯ ಹಿರಿಯ ಮುಖಂಡ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಲ್ಲೂ ಕೂಡ ಕೊರೊನಾ ಸೋಂಕು ದೃಢಪಟ್ಟಿತ್ತು.

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here