



ಬಂಟ್ವಾಳ: ಅಯೋಧ್ಯೆ ಶ್ರೀರಾಮ ಮಂದಿರದ ಭೂಮಿ ಪೂಜೆಯ ಹಿನ್ನೆಲೆಯಲ್ಲಿ ಬಂಟ್ವಾಳ ಬಿಜೆಪಿ ಯುವಮೋರ್ಚಾ ನೇತೃತ್ವದಲ್ಲಿ ಬಿ.ಸಿ.ರೋಡು ಶ್ರೀ ರಕ್ತೇಶ್ವರಿ ಸನ್ನಿಧಿಯಲ್ಲಿ ವಿಶೇಷ ಪೂಜೆ ನಡೆಯಿತು.
ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಪಾಲ್ಗೊಂಡು ಪ್ರಾರ್ಥನೆಯ ಜತೆಗೆ ಭೂಮಿ ಪೂಜೆಯ ಸವಿ ನೆನಪಿಗೆ ಗಿಡ ನೆಟ್ಟರು. ಬಳಿಕ ಮಾತನಾಡಿದ ಅವರು, ಭಾರತೀಯರ ಹಲವು ವರ್ಷಗಳ ಕನಸು ನನಸಾಗುವ ನಿಟ್ಟಿನಲ್ಲಿ ಅಯೋಧ್ಯೆಯಲ್ಲಿ ಭೂಮಿ ಪೂಜೆ ನಡೆಯುತ್ತಿದ್ದು, ಭಾರತ ಸೇರಿದಂತೆ ಇಡೀ ವಿಶ್ವದಲ್ಲೇ ಸಂಭ್ರಮಾಚರಣೆ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ಪೊಳಲಿ ಕ್ಷೇತ್ರದಲ್ಲಿ ವಿಶೇಷ ಪೂಜೆಯಲ್ಲಿ ಪಾಲ್ಗೊಂಡು ಬಳಿಕ ಅಯೋಧ್ಯೆ ಹೋರಾಟದಲ್ಲಿ ಮುಂಚೂಣಿಯಲ್ಲಿ ಗುರುತಿಸಿಕೊಂಡಿದ್ದ ಡಾ| ಪ್ರಭಾಕರ ಭಟ್ ಅವರಿಗೆ ಗೌರವಾರ್ಪಣೆ ಸಲ್ಲಿಸಿದ್ದೇನೆ ಎಂದರು.
ಯುವಮೋರ್ಚಾ ಅಧ್ಯಕ್ಷ ಪ್ರದೀಪ್ ಅಜ್ಜಿಬೆಟ್ಟು, ಜಿಲ್ಲಾ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಸುದರ್ಶನ ಬಜ, ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ರಾಮದಾಸ್ ಬಂಟ್ವಾಳ, ಯುವ ಮೋರ್ಚಾ ಕಾರ್ಯದರ್ಶಿ ಅಶ್ವತ್ ಬೆಳ್ಳೂರು, ಉಪಾಧ್ಯಕ್ಷ ಕಾರ್ತಿಕ್ ಬಳ್ಳಾಲ್, ಕೋಶಾಧಿಕಾರಿ ಶೈಲೇಶ್ ಬಿ.ಸಿ.ರೋಡು, ಪುರಸಭಾ ಸದಸ್ಯರಾದ ಹರಿಪ್ರಸಾದ್ ಭಂಡಾರಿಬೆಟ್ಟು, ಜಯಂತಿ, ವಿದ್ಯಾವತಿ, ಪುರಸಭಾ ನಾಮ ನಿರ್ದೇಶನ ಸದಸ್ಯರಾದ ಸತೀಶ್ ಶೆಟ್ಟಿ ಮೊಡಂಕಾಪು, ಲಕ್ಷಣ್ರಾಜ್ ಪಾಣೆಮಂಗಳೂರು, ಕ್ಷೇತ್ರ ಕಾರ್ಯದರ್ಶಿ ರಮನಾಥ ರಾಯಿ, ಅಕ್ರಮ ಸಮಿತಿ ಸದಸ್ಯೆ ಸುಗುಣ ಕಿಣಿ ಮೊದಲಾದವರಿದ್ದರು.





