


ವಿಟ್ಲ: ಗಾಳಿ ಮಳೆಗೆ ಮರವೊಂದು ರಸ್ತೆಗೆ ಉರುಳಿ ಬಿದ್ದ ಪರಿಣಾಮ ರಸ್ತೆ ಸಂಚಾರಕ್ಕೆ ಅಡಚಣೆಯಾಗಿದಲ್ಲದೆ, ವಿದ್ಯುತ್ ಕಂಬಕ್ಕೂ ಹಾನಿಯಾದ ಘಟನೆ ವಿಟ್ಲ ಪೋಲೀಸ್ ಠಾಣಾ ವ್ಯಾಪ್ತಿಯ ಕನ್ಯಾನದಲ್ಲಿ ಇಂದು ನಡೆದಿದೆ.
ವಿಟ್ಲ ಕನ್ಯಾನ ರಸ್ತೆಯ ಬೈರಿಕಟ್ಟೆ ಎಂಬಲ್ಲಿ ರಸ್ತೆಗೆ ಮರ ಬಿದ್ದು ರಸ್ತೆ ಸಂಚಾರ ಸ್ಥಗಿತಗೊಂಡಿರುವುಂತದ್ದು. ಬೈರಿಕಟ್ಟೆಯಿಂದ ಕನ್ಯಾನ ತೆರಳುವ ರಸ್ತೆಗೆ ಅಡ್ಡವಾಗಿ ರಾತ್ರಿಯಿಂದ ನಿರಂತರವಾಗಿ ಸುರಿಯುತ್ತಿರುವ ಭಾರೀ ಗಾಳಿ ಮಳೆಗೆ ಮರ ಮುರಿದು ಬಿದ್ದಿದೆ.
ಮರ ರಸ್ತೆಗೆ ಅಡ್ಡವಾಗಿ ಮುರಿದು ಬಿದ್ದುದುಲ್ಲದೆ, ರಸ್ತೆಯ ಬದಿಯಲ್ಲಿದ್ದ ವಿದ್ಯುತ್ ತಂತಿಯ ಮೇಲೆ ಉರುಳಿದ ಪರಿಣಾಮ ಎರಡು ವಿದ್ಯುತ್ ಕಂಬ ಮುರಿದಿದೆ. ಘಟನೆಯಿಂದ ವಿಟ್ಲ ಕಡೆಯಿಂದ ಕನ್ಯಾನ ತೆರಳುವ ವಾಹನಗಳು, ವಾಹನ ಸವಾರರು ರಸ್ತೆಯಲ್ಲಿ ಕೆಲ ತಾಸುಗಳ ಕಾಲ ಕಾದು ನಿಲ್ಲುವಂತಾಯಿತು. ಈ ಘಟನೆಯಿಂದ ವಾಹನ ಸವಾರರಿಗೆ ತೊಂದರೆಯಾಗುವುದನ್ನು ಗಮನಿಸಿದ ಸ್ಥಳೀಯರು ಸ್ಥಳಕ್ಕೆ ತೆರಳಿ ಕಾರ್ಯಾಚರಣೆ ನಡೆಸಿ ಮರವನ್ನು ತೆರವುಗೊಳಿಸಿದರು. ಮೆಸ್ಕಾಂ ಸಿಬ್ಬಂದಿ ಭೇಟಿ ನೀಡಿ, ಅಗತ್ಯ ಕ್ರಮ ಕೈಗೊಂಡರು.





