



ಬಂಟ್ವಾಳ: ದಕ್ಷಿಣ ಕನ್ನಡ ಹಾಗೂ ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ನಿನ್ನೆಯಿಂದ ನಿರಂತರವಾಗಿ ಭಾರೀ ಮಳೆಯಾಗಿದ್ದು, ಇಂದು ಕೂಡಾ ಭಾರಿ ಮಳೆಯಾಗುವ ಮುನ್ಸೂಚನೆ ಇದ್ದು, ಹವಾಮಾನ ಇಲಾಖೆ ಇಂದು ರೆಡ್ ಅಲರ್ಟ್ ಘೋಷಿಸಿದೆ.
ಅದಲ್ಲದೇ (ನಾಳೆಯಿಂದ) ಆಗಸ್ಟ್ 6ರಿಂದ 9ರ ವರೆಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ರಾಜ್ಯ ಹವಾಮಾನ ಇಲಾಖೆಯಿಂದ ಸಮುದ್ರ, ನದಿ ತೀರದ ಜನರು ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ.
ಜಿಲ್ಲಾಡಳಿತ ಕರಾವಳಿಯಾದ್ಯಂತ ಮೀನುಗಾರಿಕೆ ಸಂಪೂರ್ಣ ನಿಷೇಧ ಹೇರಲಾಗಿದ್ದು, ಮೀನುಗಾರರಿಗೆ ಎಚ್ಚರಿಕೆಯಿಂದಿರುವಂತೆ ಸೂಚಿಸಲಾಗಿದೆ.






