ಬೆಳ್ತಂಗಡಿ : ಚಾರ್ಮಾಡಿ ಘಾಟ್‌ನ 6ನೇ ತಿರುವಿನಲ್ಲಿ ಹೆದ್ದಾರಿಗೆ ಬಂಡೆಗಳು ಬಿದ್ದು, ಚಿಕ್ಕಮಗಳೂರು -ಮಂಗಳೂರು ಸಂಚಾರ ಸ್ಥಗಿತಗೊಂಡಿದೆ. ಮಂಗಳೂರು – ಚಿಕ್ಕಮಗಳೂರು ರಸ್ತೆಯ ಚಾರ್ಮಾಡಿ ಘಾಟ್ 2 ಮತ್ತು 3 ನೇ ತಿರುವಿನ ಮಧ್ಯೆ ಭೂ ಕುಸಿತವಾದ ಘಟನೆ ಬುಧವಾರ ಸಂಜೆ ನಡೆದಿದ್ದು, ಸಂಜೆ ಬೃಹದಾಕಾರದ ಎರಡು ಬಂಡೆಗಳು ಕುಸಿದಿದೆ. ಸದ್ಯ ಒಂದು ವಾಹನ ಸಾಗುವಷ್ಟು ದಾರಿ ತೆರವು ಮಾಡಲಾಗಿದೆ. ಯಾವುದೇ ಅಪಾಯ ಹಾಗೂ ಹಾನಿ ಸಂಭಿವಿಸಿಲ್ಲ ಎಂದು ವರದಿಯಾಗಿದೆ.
ಈ ಬಗ್ಗೆ ಮಾಹಿತಿ ನೀಡಿರುವ ಅಧಿಕಾರಿಗಳು, ಬುಧವಾರ ಸಂಜೆ ಚಾರ್ಮಾಡಿ ಘಾಟ್‌ ರಸ್ತೆಯಲ್ಲಿ ವಾಹನ ಸಂಚಾರಕ್ಕೆ ನಿರ್ಬಂಧ ಇರುವುದರಿಂದ ರಾತ್ರಿ ತೆರವು ಕಾರ್ಯ ನಡೆಯಲಿದೆ ಎಂದು ತಿಳಿಸಿದ್ದಾರೆ. ಕಳೆದ ಎರಡು ದಿನಗಳಿಂದ ಕರಾವಳಿಯಲ್ಲಿ ನಿರಂತರ ಮಳೆ ಸುರಿಯುತ್ತಿರುವುದರಿಂದ ಚಾರ್ಮಾಡಿ ಘಾಟ್ ರಸ್ತೆಯಲ್ಲಿ ಸಣ್ಣಪುಟ್ಟ ಭೂಕುಸಿತ ಉಂಟಾಗಿದ್ದು, ತೆರವು ಕಾರ್ಯಚರಣೆಗಾಗಿ ಜೆಸಿಬಿಗಳನ್ನು ಈಗಾಗಲೇ ನಿಯೋಜಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈಗಾಗಲೇ ಕೆಲವು ಚಿಕ್ಕಮಗಳೂರು ಪ್ರದೇಶದಲ್ಲಿ ವಾಹನ ಸಂಚಾರಕ್ಕೆ ಅಪಾಯದ ಸ್ಥಿತಿ ಇರುವುದರಿಂದಾಗಿ ವಾಹನ ಸವಾರರು ಎಚ್ಚರವಾಗಿರುವುದು ಅಗತ್ಯ ಎಂದು ತಿಳಿಸಿದ್ದಾರೆ.

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here