


ಬಂಟ್ವಾಳ: ದ.ಕ. ಜಿಲ್ಲೆಯಲ್ಲಿ ಇಂದು 173 ಹೊಸ ಕೊರೋನಾ ಕೇಸ್ ಪತ್ತೆಯಾಗಿದೆ.
11 ಮಂದಿ ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ. ಜಿಲ್ಲೆಯಲ್ಲಿ ಒಟ್ಟು ಸಾವಿನ ಸಂಖ್ಯೆ 201ಕ್ಕೆ ಏರಿಕೆಯಾಗಿದೆ.
ಇಂದು ಪತ್ತೆಯಾದ ಪ್ರಕರಣಗಳ ಪೈಕಿ 83 ಐಎಲ್ಐ ಕೊರೊನಾ ಕೇಸ್ ಗಳಾಗಿವೆ. ಜಿಲ್ಲೆಯಲ್ಲಿ 13 ಮಂದಿಗೆ ಸಾರಿ ಪ್ರಕರಣ ಪತ್ತೆಯಾಗಿದೆ. 23 ಮಂದಿಗೆ ಪ್ರಾಥಮಿಕ ಸಂಪರ್ಕದಿಂದ ಸೋಂಕು ದೃಢಪಟ್ಟಿದೆ. 50 ಮಂದಿಯ ಸೋಂಕಿನ ಮೂಲ ಪತ್ತೆ ಹಚ್ಚಲಾಗುತ್ತಿದೆ. ನಾಲ್ಕು ಮಂದಿ ವಿದೇಶದಿಂದ ಬಂದವರಲ್ಲಿ ಸೋಂಕು ದೃಢಪಟ್ಟಿದೆ
ದ.ಕ. ಜಿಲ್ಲೆಯಲ್ಲಿ 3398 ಸಕ್ರಿಯ ಪ್ರಕರಣಗಳಿವೆ. ಈವರೆಗೆ ಜಿಲ್ಲೆಯಲ್ಲಿ ಒಟ್ಟು 6715 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಇಂದು 107 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಈವರೆಗೆ ಒಟ್ಟು 3116 ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಹೊಂದಿದ್ದಾರೆ.
ಇಂದು ಪತ್ತೆಯಾದ ಪ್ರಕರಣಗಳ ವಿವರ:
ಮಂಗಳೂರಿನ 119 ಮಂದಿ, ಮೂಡಬಿದ್ರೆಯ 4, ಮೂಲ್ಕಿ 1, ಬಂಟ್ವಾಳ 21, ಬೆಳ್ತಂಗಡಿ 4, ಪುತ್ತೂರು 13, ಕಡಬ 2, ಸುಳ್ಯ 5, ಹೊರ ಜಿಲ್ಲೆಯ 4 ಮಂದಿಗೆ ಸೋಂಕು ತಗಲಿರುವ ಬಗ್ಗೆ ವರದಿಯಾಗಿದೆ.






