ಮಂಗಳೂರು: ಜಿಲ್ಲೆಯಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆ ಸ್ವಾತಂತ್ರ್ಯೋತ್ಸವ ದಿನಾಚರಣೆಯ ಸಂಧರ್ಭ ದೈಹಿಕ ಅಂತರ, ಸಾಮಾಜಿಕ ಅಂತರ ಹಾಗೂ ಮಾಸ್ಕ್‌‌‌ಗಳನ್ನು ಕಡ್ಡಾಯವಾಗಿ ಬಳಕೆ ಮಾಡುವಂತೆ ದ.ಕ. ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ತಿಳಿಸಿದ್ದಾರೆ.
ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸ್ವಾತಂತ್ರ್ಯ ದಿನಾಚರಣೆಯ ಪೂರ್ವಭಾವಿ ಸಭೆಯಲ್ಲಿ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿ, ನಗರದ ನೆಹರು ಮೈದಾನದಲ್ಲಿ ಜಿಲ್ಲಾ ಮಟ್ಟದ ಧ್ವಜಾರೋಹಣ ನಡೆಯಲಿದ್ದು, ಈ ಸಂದರ್ಭದಲ್ಲಿ ಯಾವುದೇ ಸಾಂಸ್ಕೃತಿಕ ಕಾರ್ಯಕ್ರಮಗಳು ಇರುವುದಿಲ್ಲ. ಸ್ವಾತಂತ್ರ್ಯ ದಿನಾಚರಣೆಯನ್ನು ಸಾರ್ವಜನಿಕರ ವೀಕ್ಷಣೆಗಾಗಿ ಸಾಮಾಜಿಕ ಜಾಲತಾಣಗಳಲ್ಲಿ ನೇರ ಪ್ರಸಾರ ಮಾಡಲಾಗುತ್ತದೆ. ನಗರದ ಮುಖ್ಯ ವೃತ್ತದಲ್ಲಿ ಡಿಜಿಟಲ್ ಪರದೆಯನ್ನು ಅಳವಡಿಸಿ ಸಾರ್ವಜನಿಕರ ವೀಕ್ಷಣೆಗೆ ಅನುಕೂಲವಾಗುವಂತೆ ವ್ಯವಸ್ಥೆ ಮಾಡಲಾಗಿದೆ. ಜನ ಸಾಮಾನ್ಯರು ತಮ್ಮ ದೇಶ ಭಕ್ತಿಯನ್ನು ಮನೆಯಲ್ಲಿ ಇದ್ದು ವ್ಯಕ್ತಪಡಿಸಬೇಕು ಎಂದು ಹೇಳಿದ್ದಾರೆ.
ಈ ಸ್ವಾತಂತ್ರ್ಯ ದಿನಾಚರಣೆಯಲ್ಲಿ ವಿಶೇಷವಾಗಿ ಕೊರೊನಾದ ಸಮಯದಲ್ಲಿ ಉತ್ತಮ ಕೆಲಸ ನಿರ್ವಹಿಸಿದ ಪೌರ ಕಾರ್ಮಿಕರು, ಆಶಾ ಕಾರ್ಯಕತೆಯರು, ಸ್ವಚ್ಛತಾ ಕಾರ್ಮಿಕರು, ಪೊಲೀಸರು, ವೈದ್ಯರ ಸೇವೆಯನ್ನು ಗುರುತಿಸಿ ಅವರಿಗೆ ಸನ್ಮಾನ ಮಾಡುವ ಯೋಜನೆಯನ್ನು ಜಿಲ್ಲಾಡಳಿತ ರೂಪಿಸಿಕೊಂಡಿದೆ ಎಂಬ ಮಾಹಿತಿ ನೀಡಿದ್ದಾರೆ.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ರೂಪಾ ಎಂ.ಜೆ. ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಮತ್ತಿತರು ಉಪಸ್ಥಿತರಿದ್ದರು.

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here