ಕೇರಳ: ದೇಶದ ಹಲವೆಡೆ ಭೀಕರ ಮಳೆಯಾಗುತ್ತಿದ್ದು, ಅನೇಕ ಪ್ರಾಕೃತಿಕ ವಿಕೋಪಗಳು ಸಂಭವಿಸುತ್ತಿದೆ. ಇದೀಗ ಕಳೆದ ಮೂರು ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ನಿರಂತರ ಮಳೆಯಿಂದಾಗಿ ಕೇರಳದ ಮುನ್ನಾರ್ ಪ್ರದೇಶದಲ್ಲಿ ಭೂ ಕುಸಿತ ಉಂಟಾಗಿದ್ದು, ಐವರು ಸಾವನ್ನಪ್ಪಿದ್ದಾರೆ. ಅವಶೇಷಗಳಡಿಯಲ್ಲಿ ನೂರಕ್ಕೂ ಅಧಿಕ ಮಂದಿ ಸಿಲುಕಿದ್ದಾರೆ ಎಂಬ ಶಂಕೆ ಇದೆ.

ಕೇರಳ ರಾಜ್ಯದ ಮುನ್ನಾರ್ ನ ರಾಜನಲಾ ಪ್ರದೇಶದಲ್ಲಿ ಭೂ ಕುಸಿತ ಉಂಟಾಗಿದೆ. ಭೂಕುಸಿತಕ್ಕೆ ಕ್ವಾರ್ಟರ್ಸ್ ಮತ್ತು ಚರ್ಚ್ ಕಟ್ಟಡ ಧರೆಗುರುಳಿದ ಬಗ್ಗೆ ವರದಿಯಾಗಿದೆ. ಈವರೆಗೆ 5 ಶವಗಳನ್ನು ಮಣ್ಣಿನಡಿಯಿಂದ ಹೊರತೆಗೆಯಲಾಗಿದ್ದು, ಅವಶೇಷಗಳಡಿಯಲ್ಲಿ ಸಿಲುಕಿಕೊಂಡವರನ್ನ್ನು ರಕ್ಷಿಸುವ ಕಾರ್ಯ ನಡೆಯುತ್ತಿದೆ. ಭೂಕುಸಿತ ಉಂಟಾದ ಪ್ರದೇಶ ಸಂಪೂರ್ಣ ಸಂಪರ್ಕವನ್ನು ಕಳೆದುಕೊಂಡಿದ್ದು, ಕೆಲವು ರಸ್ತೆ ಕೊಚ್ಚಿ ಹೋಗಿ ಪರಿಸ್ಥಿತಿ ಗಂಭೀರವಾಗಿದೆ ಎಂದು ಕಂದಾಯ ಸಚಿವ ಚಂದ್ರಶೇಖರನ್ ತಿಳಿಸಿದ್ದಾರೆ.

ಈ ಮೂಲಕ ಕೇರಳದಲ್ಲಿ ಈ ವರ್ಷವೂ ಪ್ರವಾಹ ತನ್ನ ಉಗ್ರರೂಪವನ್ನು ಪ್ರದರ್ಶಿಸಲಾರಂಭಿಸಿದೆ.  ಪ್ರತಿ ವರ್ಷ ದೇವರನಾಡೆಂದೇ ಕರೆಯಲಾಗುವ ಕೇರಳದಲ್ಲಿ ಪ್ರವಾಹದಿಂದ ಲಕ್ಷಾಂತರ ಎಕರೆ ಜಾಗ, ಮನೆಗಳು ಕೊಚ್ಚಿಹೋಗುತ್ತವೆ. ನೂರಾರು ಜನರು ಸಾವನ್ನಪ್ಪುತ್ತಾರೆ.

ಕೊಡಗು ಜಿಲ್ಲೆಯಲ್ಲೂ ನಿನ್ನೆ ಇದೇ ರೀತಿ ಭಾಗಮಂಡಲದ ಅರ್ಚಕರ ಕುಟುಂಬ ಮಣ್ಣಿನಡಿ ಸಿಲುಕಿ ನಾಪತ್ತೆಯಾಗಿತ್ತು.

 

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here