Sunday, April 7, 2024

ದ.ಕ. ಜಿಲ್ಲೆಯಲ್ಲಿ ಇಂದು 194 ಕೋವಿಡ್ ಕೇಸ್ ಪತ್ತೆ: 183 ಮಂದಿ ಗುಣಮುಖ

ಬಂಟ್ವಾಳ : ದ.ಕ. ಜಿಲ್ಲೆಯಲ್ಲಿ ಇಂದು 194 ಹೊಸ ಕೊರೊನಾ ಪ್ರಕರಣಗಳು ದೃಢಪಟ್ಟಿದ್ದು, 6 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ.
ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 7075 ಕ್ಕೆ ಏರಿಕೆಯಾಗಿದೆ. ಈವರೆಗೆ 214 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಪ್ರಸ್ತುತ 3374 ಸಕ್ರೀಯ ಪ್ರಕರಣಗಳಿವೆ.
ಇಂದು ದೃಢಪಟ್ಟ ಪ್ರಕರಣಗಳ ಪೈಕಿ 98 ಐಎಲ್‌ಎ, 12 ಎಸ್‌ಎಆರ್‌ಐ ಪ್ರಕರಣಗಳಾಗಿದ್ದು, 15 ಮಂದಿಗೆ ಪ್ರಾಥಮಿಕ ಸಂಪರ್ಕದಿಂದ ಸೋಂಕು ತಗುಲಿದೆ. 69 ಮಂದಿಗೆ ಸೋಂಕು ತಗುಲಿರುವ ಸಂಪರ್ಕದ ಮೂಲವನ್ನು ಪತ್ತೆ ಹಚ್ಚಲಾಗುತ್ತಿದೆ.
ಜಿಲ್ಲೆಯಲ್ಲಿ ಇಂದು 183 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, ಜಿಲ್ಲೆಯಲ್ಲಿ ಈವರೆಗೆ 3487 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ಇಂದಿನ ಪ್ರಕರಣಗಳ ವಿವರ:
ಮಂಗಳೂರಿನ 129, ಬಂಟ್ವಾಳ 15, ಬೆಳ್ತಂಗಡಿ, ಪುತ್ತೂರು ತಲಾ 16, ಸುಳ್ಯ 7 ಹಾಗೂ ಹೊರ ಜಿಲ್ಲೆಯ 11 ಮಂದಿಗೆ ಸೋಂಕು ತಗಲಿರುವ ಬಗ್ಗೆ ಮಾಹಿತಿ ಇದೆ.

More from the blog

ಬಂಟ್ವಾಳ: ನಿಯಮ ಮೀರಿ ಚಾಲನೆ ಮಾಡಿ ಪೋಲೀಸರ ಕೈಗೆ ಸಿಕ್ಕಿಬಿದ್ದರೆ ದಂಡ ಗ್ಯಾರಂಟಿ….

ಬಂಟ್ವಾಳ: ರಸ್ತೆಯಲ್ಲಿ ಟ್ರಾಫಿಕ್ ಪೋಲೀಸರು ದಂಡ ವಸೂಲಿ ಮಾಡುವ ವೇಳೆ ಸುಳ್ಳು ಹೇಳಿಬಚಾವಾಗಲು ಸಾಧ್ಯವಿಲ್ಲ, ಜೊತೆಗೆ ಅಸಭ್ಯ ವರ್ತನೆ ಮಾಡಿದರೆ ಜೋಕೆ, ಅವರ ಶರೀರದಲ್ಲಿ ಕಣ್ಗಾವಲು ಕ್ಯಾಮರಾ ಅಳವಡಿಸಿಲಾಗಿದ್ದು, ಸೂಕ್ಷ್ಮವಾಗಿ ಎಲ್ಲವನ್ನು ಸೆರೆ...

ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ : ಚೆಂಡಿನ ಗದ್ದೆಯಲ್ಲಿ ಪ್ರಥಮ ಚೆಂಡು

ಇತಿಹಾಸ ಪ್ರಸಿದ್ಧ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವದ ಅಂಗವಾಗಿ ದೇವಳದ ಚೆಂಡಿನ ಗದ್ದೆಯಲ್ಲಿ ಇಂದು ಪ್ರಥಮ ಚೆಂಡು ನಡೆಯಿತು. ‌ ಇವತ್ತಿನಿಂದ ಮುಂದಿನ ಐದು ದಿನಗಳ ಕಾಲ ಇಲ್ಲಿ ಚೆಂಡು...

ಏಪ್ರಿಲ್ 7ರಂದು ಕರ್ನಾಟಕ ಜಾನಪದ ಪರಿಷತ್ತು ದ.ಕ.ಜಿಲ್ಲಾ ಬಂಟ್ವಾಳ ತಾಲೂಕು ಘಟಕದ ಉದ್ಘಾಟನೆ ಹಾಗೂ ಪದಗ್ರಹಣ ಸಮಾರಂಭ

ಬಂಟ್ವಾಳ: ಏಪ್ರಿಲ್ 7ರಂದು ಅಪರಾಹ್ನ 3 ಗಂಟೆಗೆ ಬಿ.ಸಿ.ರೋಡು ರಂಗೋಲಿ ಸಭಾಂಗಣದಲ್ಲಿ ಕರ್ನಾಟಕ ಜಾನಪದ ಪರಿಷತ್ತು ದ.ಕ.ಜಿಲ್ಲಾ ಬಂಟ್ವಾಳ ತಾಲೂಕು ಘಟಕದ ಉದ್ಘಾಟನೆ ಹಾಗೂ ಪದಗ್ರಹಣ ಸಮಾರಂಭ ನಡೆಯಲಿದೆ ಎಂದು ತಾಲೂಕು ಘಟಕದ...

ದ್ವಿಚಕ್ರ ವಾಹನಕ್ಕೆ ರಿಕ್ಷಾ ಡಿಕ್ಕಿ : ಸಹಸವಾರ ಸ್ಥಳದಲ್ಲೇ ಮೃತ್ಯು

ಬಂಟ್ವಾಳ: ರಿಕ್ಷಾ ಡಿಕ್ಕಿಯಾಗಿ ದ್ವಿಚಕ್ರ ವಾಹನದಲ್ಲಿ ಸಂಚಾರ ಮಾಡುತ್ತಿದ್ದ ಸಹಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ನರಿಕೊಂಬು ಎಂಬಲ್ಲಿ ನಡೆದಿದೆ. ನರಿಕೊಂಬು ನಿವಾಸಿ ನೀಲಪ್ಪ ಪೂಜಾರಿ ಅವರ ಮಗ ಪವನ್ ( 17) ಮೃತಪಟ್ಟ ಬಾಲಕ. ಮನೆಯಿಂದ...