


ಬಂಟ್ವಾಳ: ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ವತಿಯಿಂದ ಕೋವಿಡ್-19 ನಿರ್ಮೂಲನ ಜಾಗೃತಿ ಅಭಿಯಾನದ ಅಂಗವಾಗಿ ಬಂಟ್ವಾಳ ತಾಲೂಕು ಎಐಟಿಯುಸಿ ಸಂಘಟನೆಯ ಸಹಯೋಗದೊಂದಿಗೆ ಸಂಘದ ಸದಸ್ಯರಾದ ಕಟ್ಟಡ ಕಾರ್ಮಿಕರಿಗೆ ಆರೋಗ್ಯ ಕಿಟ್ ವಿತರಣಾ ಕಾರ್ಯಕ್ರಮವನ್ನು ಆಗಸ್ಟ್ 11ರಂದು ಬೆಳಿಗ್ಗೆ 10 ಗಂಟೆಗೆ ಬಂಟ್ವಾಳ ಬೈಪಾಸ್ ರಸ್ತೆಯಲ್ಲಿರುವ ಕಾಮ್ರೆಡ್ ಎ ಶಾಂತಾರಾಮ್ ಪೈ ಸ್ಮಾರಕ ಭವನದ ಸಭಾಭವನದಲ್ಲಿ ಸಾಂಕೇತಿಕವಾಗಿ ಹಮ್ಮಿಕೊಳ್ಳಲಾಗಿದೆ.
ಈ ಕಾರ್ಯಕ್ರಮದಲ್ಲಿ ಮಂಗಳೂರು 1ನೇ ವಿಭಾಗದ ಕಾರ್ಮಿಕ ಅಧಿಕಾರಿ ವಿಲ್ಮಾ ತಾವ್ರೊ ಎಲಿಜಬೆತ್, ಬಂಟ್ವಾಳ ತಾಲೂಕು ಕಾರ್ಮಿಕ ನಿರೀಕ್ಷಕ ಮೆರ್ಲಿನ್ ಗ್ರೇಸಿಯಾ ಡಿಸೋಜಾ, ಎಐಟಿಯುಸಿ ಸಂಘಟನೆಯ ಕಟ್ಟಡ ಕಾರ್ಮಿಕರ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಂ. ಕರುಣಾಕರ್ ಮಾರಿಪಳ್ಳ, ಬಂಟ್ವಾಳ ತಾಲೂಕು ಕಟ್ಟಡ ಕಾರ್ಮಿಕರ ಸಂಘದ ಅಧ್ಯಕ್ಷರಾದ ದೇರಣ್ಣ ಪೂಜಾರಿ ಭಾಗವಹಿಸಲಿದ್ದಾರೆ ಎಂದು ಸಂಘದ ಪ್ರಧಾನ ಕಾರ್ಯದರ್ಶಿ ಬಿ.ಶೇಖರ್ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.





