



ಬಂಟ್ವಾಳ: ಕ್ಷೇತ್ರ ಬಿ.ಜೆ.ಪಿ ಕಛೇರಿಯಲ್ಲಿ ಜಿಲ್ಲಾ ಹಿಂದುಳಿದ ವರ್ಗಗಳ ಮೋರ್ಚಾದ ಬಂಟ್ವಾಳ ಮಂಡಲ ಹಿಂದುಳಿದ ವರ್ಗಗಳ ಮೋರ್ಚಾದ ಜವಾಬ್ದಾರಿಗಳ ಘೋಷಣೆ ಮತ್ತು ಕಾರ್ಯಕಾರಣಿ ಸಭೆ ನಡೆಸಲಾಯಿತು. ಪ್ರಾರಂಭದಲ್ಲಿ ಸಸಿನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.
ಕಾರ್ಯಕ್ರಮದ ಸಭೆಯ ಅಧ್ಯಕ್ಷತೆಯನ್ನು ಮಂಡಲದ ಹಿಂದುಳಿದ ವರ್ಗಗಳ ಅಧ್ಯಕ್ಷ ಆನಂದ ಶಂಭೂರು ಇವರು ವಹಿಸಿ ಸ್ವಾಗತಿಸಿ, ಪ್ರಸ್ತಾವಿಕ ಮಾತಾನಾಡಿದರು. ಕಾರ್ಯಕ್ರಮವನ್ನು ಮಂಡಲದ ಅಧ್ಯಕ್ಷ ದೇವಪ್ಪ ಪೂಜಾರಿಯವರ ಉದ್ಛಾಟಿಸಿ, ಪದಾಧಿಕಾರಿಗಳು ತಮ್ಮ ಜವಾಬ್ದಾರಿಯನ್ನು ಅರಿತು ಉತ್ತಮ ರೀತಿಯಲ್ಲಿ ಪಕ್ಷ ಸಂಘಟನೆಯ ಕಾರ್ಯದಲ್ಲಿ ತಮ್ಮನ್ನು ತೊಡಗಿಸಿಕೊಳ್ಳಬೇಕೇಂದು ಹೇಳಿದರು.
ಜಿಲ್ಲಾ ಹಿಂದುಳಿದ ವರ್ಗಗಳ ಮೋರ್ಚಾದ ಜಿಲ್ಲಾಧ್ಯಕ್ಷ ಆರ್.ಸಿ. ನಾರಾಯಣರವರು ನೂತನ ಪದಾಧಿಕಾರಿಗಳಿಗೆ ಪಕ್ಷದ ಶಾಲು ಹಾಕಿ ಅಭಿನಂದಿಸಿದರು. ಬಳಿಕ ಮಾತಾನಾಡಿ ಒಬ್ಬ ಸಾಮಾನ್ಯ ಕಾರ್ಯಕರ್ತ ಪಕ್ಷದ ಜವಾಬ್ದಾರಿ ಹಾಗೂ ಜನಪ್ರತಿನಿಧಿ ಆಗುವುದಿದ್ದರೆ ಅದು ಬಿ.ಜೆ.ಪಿ ಯಲ್ಲಿ ಮಾತ್ರ ಸಾಧ್ಯ ಆದ್ದರಿಂದ ತಾವು ಹೊಂದಿದ ಜವಾಬ್ದಾರಿಯನ್ನು ಪ್ರಾಮಾಣಿಕವಾಗಿ ನಿರ್ವಹಿಸಿ ಪಕ್ಷ ಸಂಘಟನೆಯಲ್ಲಿ ಪಾಲ್ಗೊಳ್ಳಿ ಎಂದು ಕರೆ ನೀಡಿದರು.ಈ ಸಂಧರ್ಭದಲ್ಲಿ ಅಯೋಧ್ಯೆಯಲ್ಲಿ ಶ್ರೀ ರಾಮ ಮಂದಿರದ ಶಿಲಾನ್ಯಾಸ ಕಾರ್ಯವನ್ನು ಯಶಸ್ವಿಯಾಗಿ ನಿರ್ವಹಿಸಿದ ಪ್ರಧಾನಿ ನರೇಂದ್ರ ಮೋದಿಯವರನ್ನು ಅಭಿನಂದಿಸುವ ನಿರ್ಣಯವನ್ನು ಕೈಗೊಳ್ಳಲಾಯಿತು.
ಈ ಕಾರ್ಯಕ್ರಮದಲ್ಲಿ ಜಿಲ್ಲಾ ಪ್ರ. ಕಾರ್ಯದರ್ಶಿ ರಾಮ್ದಾಸ್ ಬಂಟ್ವಾಳ, ಜಿಲ್ಲಾ ಹಿಂದುಳಿದ ವರ್ಗ ಮೋರ್ಚಾಗಳ ಪ್ರ.ಕಾರ್ಯದರ್ಶಿ ಮೋನಪ್ಪ ದೇವಸ್ಯ, ಜಿಲ್ಲಾ ಹಿಂದುಳಿದ ವರ್ಗಗಳ ಮೋರ್ಚಾದ ಉಪಾಧ್ಯಕ್ಷ ಯಾದವ ಕೋಟ್ಯಾನ್, ಜಿಲ್ಲಾ ಹಿಂದುಳಿದ ವರ್ಗಗಳ ಮೋರ್ಚಾದ ಕಾರ್ಯದರ್ಶಿ ಉದಯ ಕುಮಾರ್ ಕಾಂಜಿಲ, ಕ್ಷೇತ್ರ ಬಿ.ಜೆ.ಪಿ ಪ್ರ.ಕಾರ್ಯದರ್ಶಿಗಳಾದ ಡೊಂಬಯ್ಯ ಅರಳ, ರವೀಶ್ ಶೆಟ್ಟಿ, ಮಂಡಲ ಉಪಾಧ್ಯಕ್ಷ ಚಿದಾನಂದ ರೈ, ಮಂಡಲ ಕಾರ್ಯಕಾರಣಿ ಸದಸ್ಯ ಜಿನ್ರಾಜ್ ಕೋಟ್ಯಾನ್, ಕಾರ್ಯಲಯ ಕಾರ್ಯದರ್ಶಿ ಗುರುದತ್ ನಾಯಕ್, ಜಿಲ್ಲಾ ಹಿಂದುಳಿದ ವರ್ಗ ಮೋರ್ಚಾಗಳ ಸದಸ್ಯ ಮಚ್ಚೇಂದ್ರನಾಥ್ ಸಾಲ್ಯಾನ್ ಮುಂತಾದವರು ವೇದಿಕೆಯಲ್ಲಿದ್ದರು.
ಹಿಂದುಳಿದ ವರ್ಗ ಮೋರ್ಚಾಗಳ ಉಪಾಧ್ಯಕ್ಷರಾದ ನಾರಾಯಣ ಪೂಜಾರಿ, ಪುರುಷೋತ್ತಮ ಟೈಲರ್, ಕಾರ್ಯದರ್ಶಿಗಳಾದ ಮೋಹನದಾಸ ಕೊಟ್ಟಾರಿ, ಸಂತೋಷ, ಚಿದಾನಂದ, ಕೋಶಾಧಿಕಾರಿಯಾದ ಪರಮೇಶ್ವರ ಪೂಜಾರಿ, ಸದಸ್ಯರಾದ ಯೋಗೀಶ, ವೀರಪ್ಪ ಮೂಲ್ಯ, ಸುರೇಶ್ ಮೈರ, ಕಿಶೋರ್ ದಾಸರಕೋಡಿ, ಯತೀಶ್ ಕುಕ್ಕಾಜೆ, ಅಶೋಕ್ ಮರ್ದೋಳಿ ಉಪಸ್ಥಿತರಿದ್ದರು.
ಮಂಡಲ ಹಿಂದುಳಿದ ವರ್ಗ ಮೋರ್ಚಾಗಳ ಪ್ರ.ಕಾರ್ಯದರ್ಶಿ ಉಮೇಶ್ ಡಿ.ಎಂ. ಅರಳ ಕಾರ್ಯಕ್ರಮ ನಿರೂಪಿಸಿದರು.





