



ಬಂಟ್ವಾಳ: ದ.ಕ. ಜಿಲ್ಲೆಯಲ್ಲಿ ಇಂದು ಕೂಡ ಪತ್ತೆಯಾದ ಸೋಂಕಿಗಿಂತ ಗುಣಮುಖರಾದವರು ಅಧಿಕ ಮಂದಿ ಎಂದು ವರದಿಯಾಗಿದೆ.
ಇಂದು ಪತ್ತೆಯಾದ 146 ಪ್ರಕರಣಗಳ ಪೈಕಿ ಪ್ರಾಥಮಿಕ ಸಂಪರ್ಕದಿಂದ 15 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ. 81 ಐಎಲ್ಐ ಪ್ರಕರಣಗಳಾಗಿದ್ದು, 16 ಮಂದಿಯಲ್ಲಿ ಸಾರಿ ಪ್ರಕರಣ ಪತ್ತೆಯಾಗಿವೆ. ನಾಲ್ವರು ವಿದೇಶದಿಂದ ಮರಳಿದವರಲ್ಲಿ ಸೋಂಕು ಪತ್ತೆಯಾಗಿದ್ದು, ಇನ್ನುಳಿದ 30 ಮಂದಿಯ ಸೋಂಕಿನ ಮೂಲ ಪತ್ತೆ ಹಚ್ಚಲಾಗುತ್ತಿದೆ.
ಇಂದು ಪತ್ತೆಯಾದ ಪ್ರಕರಣಗಳ ಪೈಕಿ ಮಂಗಳೂರಿನ 94 ಮಂದಿಗೆ, ಬಂಟ್ವಾಳದ 11 ಮಂದಿಗೆ, ಪುತ್ತೂರಿನ 7, ಸುಳ್ಯದ ಒಬ್ಬರಿಗೆ, ಬೆಳ್ತಂಗಡಿಯ 16 ಮಂದಿಗೆ ಹಾಗೂ ಹೊರ ಜಿಲ್ಲೆಯ 17 ಮಂದಿಗೆ ಸೋಂಕು ದೃಢಪಟ್ಟಿದೆ.
ಈವರೆಗೆ ಒಟ್ಟು ಸೋಂಕಿತರ ಸಂಖ್ಯೆ 7353ಕ್ಕೆ ಏರಿಕೆಯಾಗಿದೆ. ಇಂದು ಜಿಲ್ಲೆಯಲ್ಲಿ 533 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.
ಪ್ರಸ್ತುತ ಜಿಲ್ಲೆಯಲ್ಲಿ 2,910 ಸಕ್ರೀಯ ಪ್ರಕರಣಗಳಿವೆ.
ಜಿಲ್ಲೆಯಲ್ಲಿ ಈವರೆಗೆ ಒಟ್ಟು 4215 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಇಂದು ಜಿಲ್ಲೆಯಲ್ಲಿ ಕೊರೊನಾ ಸೋಂಕಿಗೆ 8 ಮಂದಿ ಬಲಿಯಾಗಿರುವ ಬಗ್ಗೆ ವರದಿಯಾಗಿದೆ.






