



ಬಂಟ್ವಾಳ: ಕಾಂಗ್ರೆಸ್ ಪಕ್ಷದ ಹಿರಿಯ ನೇತಾರರು, ಸಾಮಾಜಿಕ ಕಾರ್ಯಕರ್ತರಾಗಿದ್ದು, ಮಾಜಿ ವಲಯ ಕಾಂಗ್ರೆಸ್ ಅಧ್ಯಕ್ಷರಾಗಿದ್ದ ದಿನೇಶ್ ಶೆಣೈ ಕಲ್ಲಡ್ಕರವರು ನಿನ್ನೆ ಅಸೌಖ್ಯದಿಂದ ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.
ಮಾಜಿ ಸಚಿವ ರಮಾನಾಥ್ ರೈ, ಮಾಜಿ ಸಚಿವ, ಮಂಗಳೂರು ಶಾಸಕ ಯು.ಟಿ. ಖಾದರ್ ಸಹಿತ ಹಲವು ಮುಖಂಡರು ದಿನೇಶ್ ಶೆಣೈ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.






