


ಬಂಟ್ವಾಳ: ದ.ಕ. ಜಿಲ್ಲೆಯಲ್ಲಿ ಇಂದು 243 ಕೋವಿಡ್ ಕೇಸ್ ಪತ್ತೆಯಾಗಿದೆ. ಒಟ್ಟು ಸೋಂಕಿತರ ಸಂಖ್ಯೆ 7596 ಕ್ಕೆ ಏರಿಕೆಯಾಗಿದೆ. ಇಂದು 9 ಮಂದಿ ಸೋಂಕಿತರು ಮೃತಪಟ್ಟಿದ್ದು, ಈವರೆಗೆ 237 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ ಎಂಬ ಮಾಹಿತಿ ಇದೆ.
ಇಂದು ಪತ್ತೆಯಾದ ಪ್ರಕರಣಗಳ ಪೈಕಿ ಮಂಗಳೂರಿನ 189, ಬಂಟ್ವಾಳದ 30, ಪುತ್ತೂರು 6, ಬೆಳ್ತಂಗಡಿ 10 ಹಾಗೂ ಇತರ ಜಿಲ್ಲೆಯ ನಾಲ್ವರಿಗೆ ಸೋಂಕು ದೃಢ ಪಟ್ಟ ಬಗ್ಗೆ ವರದಿಯಾಗಿದೆ.
ಇಂದು ಸೋಂಕು ಪತ್ತೆಯಾದವರ ಪೈಕಿ 23 ಮಂದಿಗೆ ಪ್ರಾಥಮಿಕ ಸಂಪರ್ಕದಿಂದ ಕೊರೋನಾ ದೃಢಪಟ್ಟಿದ್ದು, 88 ಮಂದಿಯ ಸೋಂಕಿನ ಮೂಲ ಪತ್ತೆ ಹಚ್ಚಲಾಗುತ್ತಿದೆ.
ಇಂದು ಕೂಡ ಗುಣಮುಖರಾದವರ ಸಂಖ್ಯೆ ಹೆಚ್ಚಿದ್ದು, 519 ಮಂದಿ ಗುಣಮುಖರಾದ ಬಗ್ಗೆ ವರದಿಯಾಗಿದೆ. ಈವರೆಗೆ ಜಿಲ್ಲೆಯಲ್ಲಿ 4734 ಮಂದಿ ಸಂಪೂರ್ಣ ಗುಣಮುಖರಾಗಿದ್ದಾರೆ. ಪ್ರಸ್ತುತ 2625 ಸಕ್ರೀಯ ಪ್ರಕರಣಗಳಿವೆ.





