Tuesday, October 31, 2023

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕೊರೊನಾದಿಂದ ಗುಣಮುಖರಾಗಿ ನಾಳೆ ಡಿಸ್ಚಾರ್ಜ್

Must read

ಬೆಂಗಳೂರು: ವಿಧಾನಸಭೆಯ ವಿರೋಧ ಪಕ್ಷದ ನಾಯಕ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕೊರೊನಾ ಸೋಂಕು ದೃಢಪಟ್ಟು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದು, ಅವರು ಈಗ ಸಂಪೂರ್ಣವಾಗಿ ಗುಣಮುಖರಾಗಿ ನಾಳೆ ಬಿಡುಗಡೆಯಾಗಲಿದ್ದಾರೆ.

ಈ ಬಗ್ಗೆ ವೈದ್ಯರು ಮಾಹಿತಿ ನೀಡಿದ್ದು, ”ಸಿದ್ದರಾಮಯ್ಯನವರಿಗೆ ಎರಡನೇ ಬಾರಿ ನಡೆಸಿದ ಗಂಟಲು ದ್ರವ ಹಾಗೂ ರಕ್ತ ಪರೀಕ್ಷೆಯಲ್ಲಿ ನೆಗೆಟಿವ್ ಬಂದಿದೆ. ನಾಳೆ ಆಸ್ಪತ್ರೆಯಿಂದ ಬಿಡುಗಡೆಯಾಗಲಿದ್ದಾರೆ” ಎಂದು ತಿಳಿಸಿದ್ದಾರೆ.

ಕಳೆದ ಮಂಗಳವಾರ ಕೊರೊನಾ ಸೋಂಕು ದೃಢಪಟ್ಟ ಸಿದ್ದರಾಮಯ್ಯ ಅವರು ಆಸ್ಪತ್ರೆಗೆ ದಾಖಲಾಗಿದ್ದು ಎರಡು ದಿನಗಳ ಕಾಲ ಜ್ವರ ಕಾಣಿಸಿಕೊಂಡಿತ್ತು. ಮತ್ತೆ ಯಾವುದೇ ಲಕ್ಷಣಗಳು ಕಂಡು ಬಂದಿಲ್ಲ ಎಂಬ ಮಾಹಿತಿ ಇದೆ.

More articles

Latest article