ಜಮ್ಮು-ಕಾಶ್ಮೀರ: ಇಲ್ಲಿನ ಪುಲ್ವಾಮಾ ಜಿಲ್ಲೆಯ ಆವಂತಿಪೋರಾದಲ್ಲಿ ಭದ್ರತಾ ಪಡೆ ಶೋಧ ಕಾರ್ಯಾಚರಣೆ ನಡೆಸಿದ್ದು, ಉಗ್ರರ ಅಡಗುತಾಣವನ್ನು ಪತ್ತೆ ಹಚ್ಚಿದ್ದಾರೆ. ಭದ್ರತಾ ಪಡೆ ಶೋಧ ಕಾರ್ಯಾಚರಣೆ ವೇಳೆ ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಆವಂತಿಪೋರಾ ಪ್ರದೇಶದಲ್ಲಿ ಉಗ್ರರು ಅಡಗಿದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ ಸೇನೆ ಮತ್ತು ಜಮ್ಮು-ಕಾಶ್ಮೀರ ಪೊಲೀಸರು ಸೇರಿ ಈ ಕಾರ್ಯಾಚರಣೆ ನಡೆಸಿದ್ದರು. ಆದರೆ ಶೋಧ ಕಾರ್ಯಾಚರಣೆ ವೇಳೆ ಉಗ್ರರು ಪರಾರಿಯಾಗಿದ್ದು, ಅಡಗುತಾಣ ಪತ್ತೆಯಾಗಿರುವುದಾಗಿ ಪೊಲೀಸ್ ಅಧಿಕಾರಿ ವಿವರಿಸಿದ್ದಾರೆ. ಎಕೆ 47 ಗನ್ ನ ರೌಂಡ್ಸ್ ಗಳು, ಗ್ರೆನೇಡ್ಸ್ ಸೇರಿದಂತೆ ಅಪಾರ ಪ್ರಮಾಣದ ಶಸ್ತ್ರಾಸ್ತ್ರ ಅಡಗುತಾಣದಿಂದ ವಶಕ್ಕೆ ಪಡೆಯಲಾಗಿದ್ದು, ಘಟನೆ ಬಗ್ಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ ಎಂದು ವರದಿಯಾಗಿದೆ.

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here