



ಸಿದ್ದಕಟ್ಟೆ: ಸಿದ್ದಕಟ್ಟೆ, ಕರಿಂಕಿಜೆ ನಿವಾಸಿ ಸುರೇಂದ್ರ ಶೆಟ್ಟಿ, (81) ಇವರು ಅಲ್ಪಕಾಲದ ಅಸೌಖ್ಯದಿಂದ ಆ.13 ರಂದು ಗುರುವಾರ ಸ್ವ ಗೃಹದಲ್ಲಿ ನಿಧನ ಹೊಂದಿದರು.
ಸ್ಠಳೀಯವಾಗಿ ಜನಾನುರಾಗಿಯಾಗಿದ್ದ ಇವರು ಸಾಮಾಜಿಕ, ಧಾರ್ಮಿಕ ಕಾರ್ಯಗಳಿಗೆ ಪ್ರೋತ್ಸಾಹ ನೀಡುತ್ತಿದ್ದರು.
ಮೃತರು ಪತ್ನಿ, ನಾಲ್ವರು ಪುತ್ರರು, ಇಬ್ವರು ಪುತ್ರಿಯರು, ಅಳಿಯಂದಿರು, ಸೊಸೆಯಾಂದಿರು, ಮೊಮ್ಮಕ್ಕಳು ಹಾಗೂ ಅಪಾರ ಕುಟುಂಬವರ್ಗವನ್ನು ಅಗಲಿದ್ದಾರೆ.
ಮೃತರ ಬಗ್ಗೆ ಸಂತಾಪ ವ್ಯಕ್ತಪಡಿಸಿರುವ ಶಾಸಕ ರಾಜೇಶ್ ನಾಯ್ಕ್ಉಳಿಪಾಡಿ, ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದ್ದಾರೆ.






