Friday, April 19, 2024

ಆ.16 ರಿಂದ ಪಿಲಿಕುಳ ಮೃಗಾಲಯ ಸಾರ್ವಜನಿಕ ವೀಕ್ಷಣೆಗೆ ಅವಕಾಶ

ಮಂಗಳೂರು: ಆ.16ರಿಂದ ಪಿಲಿಕುಳ ಮೃಗಾಲಯ ಸಾರ್ವಜನಿಕ ವೀಕ್ಷಣೆಗೆ ಮುಕ್ತವಾಗಿದ್ದು, ಮುಂಜಾನೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಸಾರ್ವಜನಿಕರ ವೀಕ್ಷಣೆಗೆ ಅವಕಾಶ ಕಲ್ಪಿಸಲಾಗುವುದು ಎಂದು ಪಿಲಿಕುಳ ಜೈವಿಕ ಉದ್ಯಾನವನದ ನಿರ್ದೇಶಕ ಹೆಚ್‌‌‌.ಜೆ.ಭಂಡಾರಿ ತಿಳಿಸಿದ್ದಾರೆ.
ಪ್ರತೀ ಸೋಮವಾರ ಮೃಗಾಲಯದ ನಿರ್ವಹಣೆ ಕಾರ್ಯ ನಡೆಯಬೇಕಾಗಿರುವುದರಿಂದ ಸಾರ್ವಜನಿಕರಿಗೆ ವೀಕ್ಷಣೆಗೆ ಅವಕಾಶವಿಲ್ಲ. ಇನ್ನು ಮೃಗಾಲಯಕ್ಕೆ ಬರುವ ಸಂದರ್ಭ ಕೊರೊನಾ ಬಗ್ಗೆ ಜಿಲ್ಲಾಡಳಿತ ನೀಡುತ್ತಿರುವ ಆದೇಶಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ತಿಳಿಸಿದ್ದಾರೆ.
ಮೃಗಾಲಯಕ್ಕೆ ಬರುವ ವೇಳೆ ಸಂದರ್ಶಕರು ಮಾಸ್ಕ್‌ ಅನ್ನು ಕಡ್ಡಾಯವಾಗಿ ಸರಿಯಾಗಿ ಧರಿಸಬೇಕು. ಪ್ರವೇಶ ದ್ವಾರದಲ್ಲಿ ಥರ್ಮಲ್‌ ಸ್ಕ್ಯಾನಿಂಗ್‌‌‌‌‌‌‌‌ ಪರೀಕ್ಷೆ ಮಾಡಲಾಗುವುದು. ಅದಲ್ಲದೇ, ಕೈಗಳನ್ನು ಸ್ಯಾನಿಟೈಸ್‌ ಮಾಡಲಾಗುವುದು. ಮೃಗಾಲಯದ ಒಳಗೆ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಬೇಕು. ಮೃಗಾಲಯದಲ್ಲಿ 76 ಸಿಸಿ ಕ್ಯಾಮರಾಗಳನ್ನು ಅಳವಡಿಸಲಾಗುತ್ತಿದೆ. ಸಾರ್ವಜನಿಕರು ಸಹಕರಿಸಬೇಕು ಎಂದು ಕೋರಿದ್ದಾರೆ.
ಪ್ರವೇಶ ದ್ವಾರದ ಬೋಕ್ಸ್‌‌‌ ಆಫೀಸ್‌‌ನಲ್ಲೇ ಟಿಕೇಟ್‌‌ ಅನ್ನು ನೀಡಲಾಗುವುದು. ಮೃಗಾಲಯದ ಎದುರುಗಡೆ ನಿಗದಿಪಡಿಸಿದ ಪ್ರದೇಶದಲ್ಲಿ ವಾಹನಗಳನ್ನು ನಿಲುಗಡೆ ಮಾಡಲು ಅನುಮತಿ ನೀಡಲಾಗಿದೆ ಎಂದು ಪಿಲಿಕುಳ ಜೈವಿಕ ಉದ್ಯಾನವನದ ನಿರ್ದೇಶಕ ಹೆಚ್‌‌‌.ಜೆ.ಭಂಡಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕೊರೊನಾ ಸೋಂಕು ಹಾಗೂ ಮಳೆಗಾಲದ ಹಿನ್ನೆಲೆ ಪಿಲಿಕುಳ ನಿಸರ್ಗಧಾಮ ಬಂದ್‌ ಮಾಡಲಾಗಿತ್ತು. ಇದೀಗ ಜಿಲ್ಲಾಡಳಿತ ಕೊರೊನಾ ಬಗ್ಗೆ ನೀಡುತ್ತಿರುವ ಆದೇಶಗಳನ್ನು ಕಡ್ಡಾಯವಾಗಿ ಪಾಲಿಸುವುದರೊಂದಿಗೆ ಮೃಗಾಲಯ ಸಾರ್ವಜನಿಕ ವೀಕ್ಷಣೆಗೆ ಅವಕಾಶ ಕಲ್ಪಿಸಲಾಗಿದೆ ಎಂದು ಪಿಲಿಕುಳ ಜೈವಿಕ ಉದ್ಯಾನವನದ ನಿರ್ದೇಶಕ ಸ್ಪಷ್ಟಪಡಿಸಿದ್ದಾರೆ.

More from the blog

ನೇತ್ರಾವತಿ ನದಿ ತೀರದ ಕೃಷಿಕರ ಪಂಪ್ ಸೆಟ್ ಗಳ ವಿದ್ಯುತ್ ಸ್ಥಗಿತ : ರೈತರಿಂದ ಪ್ರತಿಭಟನೆ

ಬಂಟ್ವಾಳ: ದ.ಕ.ಜಿಲ್ಲಾಡಳಿತವೂ ಮಂಗಳೂರು ನಗರಕ್ಕೆ ಕುಡಿಯುವ ನೀರು ಕೊರತೆಯಾಗುತ್ತಿದೆ ಎಂದು ನೇತ್ರಾವತಿ ನದಿ ಪಾತ್ರದ ಕೃಷಿ ಪಂಪ್ ಸೆಟ್ ಗಳ ವಿದ್ಯುತ್ ಕಡಿತ ಮಾಡಿರುವ ವಿರುದ್ಧ ರೈತರು ಬಂಟ್ವಾಳ ತಾಲೂಕು ಆಡಳಿತ ಸೌಧದ...

ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಾಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ : ರಸ್ತೆ ಸಂಚಾರದಲ್ಲಿ ಬದಲಾವಣೆ

ಮಂಗಳೂರು: ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಾಸ್ಥಾನದಲ್ಲಿ ನಡೆಯುವ ವಾರ್ಷಿಕ ಜಾತ್ರಾ ಮಹೋತ್ಸವದ ಅಂಗವಾಗಿ ಸಾರ್ವಜನಿಕರ ಹಿತ ಹಾಗೂ ವಾಹನಗಳ ಸುಗಮ ಸಂಚಾರದ ದೃಷ್ಟಿಯಿಂದ ಎ.19 ಮತ್ತು 20ರಂದು ಕಟೀಲು ಪರಿಸರದಲ್ಲಿ ವಾಹನ ಸಂಚಾರದಲ್ಲಿ...

ಏಪ್ರಿಲ್ 25, 26ರಂದು ನಂದಿ ಗಿರಿಧಾಮಕ್ಕೆ ಪ್ರವೇಶ ನಿರ್ಬಂಧ

ಚಿಕ್ಕಬಳ್ಳಾಪುರ: ಲೋಕಸಭೆ ಚುನಾವಣೆಯಲ್ಲಿ ಮತದಾನ ಪ್ರಮಾಣ ಹೆಚ್ಚಿಸುವ ಉದ್ದೇಶದಿಂದ ಏಪ್ರಿಲ್ 25 ಮತ್ತು 26ರಂದು ಪ್ರಸಿದ್ಧ ಪ್ರವಾಸಿ ತಾಣ ನಂದಿ ಗಿರಿಧಾಮ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ. ಏ.25ರ ಸಂಜೆ 6ರಿಂದ 26ರ ರಾತ್ರಿ 8ರ...

ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ : ಮಹಿಳೆ ಗಂಭೀರ

ಬೆಳ್ತಂಗಡಿ: ತನ್ನ ಮನೆಯ ಸಾಕು ನಾಯಿ ಜತೆ ಮನೆ ಮಾಲಕಿ ಮುದ್ದಾಡುವಾಗ ಏಕಾಏಕಿ ದಾಳಿ ಮಾಡಿ ತಲೆ ಭಾಗವನ್ನು ಸೀಳಿ ಹಾಕಿ ಕೈಗೆ ಗಂಭೀರ ಗಾಯ ಮಾಡಿದ ಘಟನೆ ಬೆಳ್ತಂಗಡಿ ತಾಲೂಕಿನ ಮುಂಡಾಜೆ...